ಗ್ರಾಮ ಪಂಚಾಯತಿ ಅಧ್ಯಕ್ಷ ವಜಾ...

Gram Panchayat President fired

02-03-2018

ಚಿತ್ರದುರ್ಗ: ಉದ್ಯೋಗ ಖಾತ್ರಿ ಯೋಜನೆಯ ಹಣವನ್ನು ದುರುಪಯೋಗ ಮಾಡಿರುವ ಹಿನ್ನೆಲೆ, ಗ್ರಾಮ ಪಂಚಾಯತಿ ಅಧ್ಯಕ್ಷನನ್ನು ಅನರ್ಹಗೊಳಿಸಿ ಸರ್ಕಾರ ಆದೇಶಿಸಿದೆ. ಚಿತ್ರದುರ್ಗ ಜಿಲ್ಲೆಯ ಮತ್ತೋಡು ಗ್ರಾಮ ಪಂಚಾಯತಿ ಅಧ್ಯಕ್ಷ ರಾಮಪ್ಪನ ಎಂಬುವರ ಸದಸ್ಯತ್ವ ರದ್ದುಗೊಳಿಸಿದೆ. ಉದ್ಯೋಗ ಖಾತ್ರಿ ಯೋಜನೆಯ ಸುಮಾರು‌ 2 ಲಕ್ಷ ರೂ. ದುರುಪಯೋಗ ಮಾಡಿದ್ದಾರೆ ಎನ್ನಲಾಗಿದೆ. ಆದರೆ ತಮ್ಮನ್ನು ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಿದ್ದನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಲು ರಾಮಪ್ಪ ಮುಂದಾಗಿದ್ದಾರೆ.


ಸಂಬಂಧಿತ ಟ್ಯಾಗ್ಗಳು

panchayath NREGA ಉದ್ಯೋಗ ಖಾತ್ರಿ ಹೈಕೋರ್ಟ್


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ