ರಾಜ್ಯಸಭೆಗೆ ಕಾಂಗ್ರೆಸ್ ಅಭ್ಯರ್ಥಿಗಳು ಯಾರು?

Who are the Congress candidates for the Rajya Sabha?

02-03-2018

ಬೆಂಗಳೂರು: ರಾಜ್ಯಸಭೆ ಚುನಾವಣೆಗೆ ಅಭ್ಯರ್ಥಿ ಆಯ್ಕೆಗೆ ಕಾಂಗ್ರೆಸ್ ಪಕ್ಷ ಕಸರತ್ತು ನಡೆಸಿದೆ. ದಲಿತ ಕೋಟಾದಲ್ಲಿ ಲೋಕಸಭೆಯ ಮಾಜಿ ಸ್ಪೀಕರ್ ಮೀರಾ ಕುಮಾರ್ ಅವರನ್ನು ರಾಜ್ಯದಿಂದ ಆರಿಸಿ ಕಳುಹಿಸಲು ಹಿರಿಯ ಮಖಂಡರು ಯತ್ನಿಸುತ್ತಿದ್ದಾರೆ ಎನ್ನಲಾಗಿದೆ. ಲಿಂಗಾಯತ ಕೋಟಾದಲ್ಲಿ ಮಾಜಿ ಸಚಿವೆ ರಾಣಿ ಸತೀಶ್, ಮಾಜಿ ಸಿಎಂ ವಿರೇಂದ್ರ ಪಾಟೀಲ್ ಪುತ್ರ ಕೈಲಾಶ್ ನಾಥ್ ಪಾಟೀಲ್, ಶಾಮನೂರು ಶಿವಶಂಕರಪ್ಪ ಅವರ ಹೆಸರುಗಳು ಮುಂಚೂಣಿಯಲ್ಲಿವೆ. ಅಲ್ಪ ಸಂಖ್ಯಾತರ ಕೋಟಾದಲ್ಲಿ ರೋಶನ್ ಬೇಗ್, ನಜೀರ್ ಅಹಮದ್, ಸಲೀಂ ಅಹಮದ್ ಮತ್ತು ರೆಹಮಾನ್ ಖಾನ್ ಅವರ ಹೆಸರುಗಳು ಕೇಳಿಬರುತ್ತಿವೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ