ಚರಂಡಿಯಲ್ಲಿ ಮೃತ ದೇಹ ಪತ್ತೆ

A Dead body found in sewage chikkaballapura

02-03-2018

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ನಗರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ ಹಿಂಬಾಗದ ಚರಂಡಿಯಲ್ಲಿ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದೆ. ಸುಮಾರು 40ರ ಆಸುಪಾಸಿನ ವ್ಯಕ್ತಿಯ ಶವವಾಗಿದ್ದು, ನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿ, ಜಿಲ್ಲಾಸ್ಪತ್ರೆಗೆ ಶವವನ್ನು ರವಾನಿಸಿದ್ದಾರೆ. ಕುಡಿದ ಅಮಲಿನಲ್ಲಿ ಅಥವಾ ಕಾಲು ಜಾರಿ ಬಿದ್ದು ಸಾವನ್ನಪ್ಪಿರುವ ಬಗ್ಗೆ ಅನುಮಾನಗಳು ವ್ಯಕ್ತವಾಗಿವೆ. ಜನನಿಬಿಡ ಪ್ರದೇಶದಲ್ಲಿ ಶವ ಕಂಡು ಜನರು ಆತಂಕಗೊಂಡಿದ್ದಾರೆ. ಚಿಕ್ಕಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಸಂಬಂಧಿತ ಟ್ಯಾಗ್ಗಳು

dead body Bus stand ನಿಲ್ದಾಣ ಜನನಿಬಿಡ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ