ಬಿಜೆಪಿ ಪಾದಯಾತ್ರೆ, ಜನರಿಗೆ ಟ್ರಾಫಿಕ್ ಕಿರಿಕಿರಿ

BJP paadayatre: huge trafic jam

02-03-2018

ಬೆಂಗಳೂರು: ಬಿಜೆಪಿ ಹಮ್ಮಿಕೊಂಡಿರುವ ಬೆಂಗಳೂರು ರಕ್ಷಿಸಿ ಬಿಜೆಪಿ ಪಾದಯಾತ್ರೆ ಗವಿ ಗಂಗಾಧರೇಶ್ವರ ದೇವಸ್ಥಾನದಿಂದ ಆರಂಭವಾಗಿದೆ. ಪೂಜೆಗೂ ಮುನ್ನವೇ ದೇಗುಲದ ಎದುರು ಸಾಕಷ್ಟು ಸಂಖ್ಯೆಯಲ್ಲಿ ಕಾರ್ಯಕರ್ತರು ಜಮಾಯಿಸಿದ್ದರು. ರಾಜ್ಯ ಚುನಾವಣಾ ಉಸ್ತುವಾರಿ ಪ್ರಕಾಶ್ ಜಾವಡೇಕರ್, ಆರ್.ಅಶೋಕ್,  ಕೇಂದ್ರ ಸಚಿವ ಅನಂತಕುಮಾರ್ ಗವಿಗಂಗಾಧರೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು. ನಂತರ ಪ್ರಮುಖ ಬೀದಿಗಳಲ್ಲಿ ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರು ‘ಕಾಂಗ್ರೆಸ್ ನಿಂದ ಬೆಂಗಳೂರು ರಕ್ಷಿಸಿ’ ಎಂಬ ಘೋಷಣೆಯೊಂದಿಗೆ ಪಾದಯಾತ್ರೆ ಆರಂಭಿಸಿದ್ದಾರೆ. ಆದರೆ, ಈ  ಪಾದಯಾತ್ರೆ ಮುಂದುವರಿದ ಕಡೆಯಲ್ಲೆಲ್ಲ ಟ್ರಾಫಿಕ್ ಜಾಮ್ ಉಂಟಾಗುತ್ತಿದ್ದು ಸಾರ್ವಜನಿಕರು ಪರದಾಡುವಂತಾಗಿದೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ