ಕಾವೇರಿ ನೀರು-ದೇವೇಗೌಡರ ಪಾತ್ರ

Cauvery Water-Deve Gowda

02-03-2018

ಬೆಂಗಳೂರು: ಕಾವೇರಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ, ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು, ಕೇಂದ್ರ ಜಲಸಂಪನ್ಮೂಲ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ ಚರ್ಚಿಸಲಿದ್ದಾರೆ. ಈ ಕುರಿತು ಸಿದ್ಧತೆ ಆರಂಭಿಸಿರುವ ದೇವೇಗೌಡರು, ಹಾಸನದ ಹೇಮಾವತಿ ಜಲಾಶಯಕ್ಕೆ ಭೇಟಿ ನೀಡಿ, ನೀರು ಸಂಗ್ರಹದ ಕುರಿತು ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ. ನಿತಿನ್ ಗಡ್ಕರಿ ಭೇಟಿ ವೇಳೆ, ರಾಜ್ಯದಲ್ಲಿನ ನೀರಿನ ಸ್ಥಿತಿಗತಿಯ ಬಗ್ಗೆ ದೇವೇಗೌಡರು ವಿವರಣೆ ನೀಡಲಿದ್ದಾರೆ. ಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆ ಕಷ್ಟ ಎಂಬ ಸಚಿವ ಗಡ್ಕರಿ ಹೇಳಿಕೆಗೆ ದೇವೇಗೌಡರು ಸಂತಸ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.


ಸಂಬಂಧಿತ ಟ್ಯಾಗ್ಗಳು

H.D.Deve Gowda nitin gadkari ಹೇಮಾವತಿ ಜಲಸಂಪನ್ಮೂಲ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ