ಬಿಜೆಪಿಯಲ್ಲಿ ಟಿಕೆಟ್ ಗಾಗಿ ತಳಮಳ

candidates v/s election ticket

02-03-2018

ಶಿವಮೊಗ್ಗ: ಚುನಾವಣೆ ಸಮೀಪಿಸುತ್ತಿದ್ದಂತೆ ಬಿಜೆಪಿ ಟಿಕೆಟ್ ಆಕಾಂಕ್ಷಿಗಳ ಎದೆಯಲ್ಲಿ ಢವಢವ ಶುರುವಾಗಿದೆ. ಟಿಕೆಟ್ ಕೈ ತಪ್ಪುವ ಆತಂಕದಲ್ಲಿರುವ ಆಕಾಂಕ್ಷಿಗಳ ಬೆಂಬಲಿಗರು, ಟಿಕೆಟ್ ಗಾಗಿ ಒತ್ತಾಯದ ಮಾರ್ಗ ಹಿಡಿದಿದ್ದಾರೆ. ಸಾಗರ ಕ್ಷೇತ್ರಕ್ಕೆ ಹರತಾಳು ಹಾಲಪ್ಪ ಅವರನ್ನು ಬಿಜೆಪಿ ಅಭ್ಯರ್ಥಿ ಎಂದು ಬಿಜೆಪಿ ಈಗಾಗಲೇ ಯಡಿಯೂರಪ್ಪ ಘೋಷಿಸಿದ್ದಾರೆ. ಆದರೆ, ಗೋಪಾಲಕೃಷ್ಣ ಬೇಳೂರ್ ಅವರಿಗೆ ಟಿಕೆಟ್ ನೀಡುವಂತೆ ಅವರ ಬೆಂಬಲಿಗರು ಒತ್ತಾಯಿಸಿದ್ದಾರೆ. ಜಿಲ್ಲಾ ಬಿಜೆಪಿ ಕಚೇರಿ ಮುಂದೆ ಜಮಾಯಿಸಿದ ಬೆಂಬಲಿಗರು ಗೆಲ್ಲುವ ಅಭ್ಯರ್ಥಿಗೆ ಟಿಕೆಟ್ ನೀಡಬೇಕು ಎಂದು ಪರೋಕ್ಷವಾಗಿ ಹರತಾಳು ಹಾಲಪ್ಪ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ. ಈ ಸಂದರ್ಭದಲ್ಲಿ ಜಿ.ಪಂ. ಸದಸ್ಯ ಆರ್.ಸಿ.ಮಂಜುನಾಥ್ ಮತ್ತು ಬಿಜೆಪಿ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಶರಾವತಿ ಮತ್ತಿತರರು ಹಾಜರಿದ್ದರು.


ಸಂಬಂಧಿತ ಟ್ಯಾಗ್ಗಳು

Belur Gopalakrishna BJP ಅಸಮಾಧಾನ ಆತಂಕ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ