ಊಬರ್ ಕಾರು ಚಾಲಕನ ಮೇಲೆ ಹಲ್ಲೆ

Uber car driver assaulted by 4 people

02-03-2018

ಬೆಂಗಳೂರು: ಕೆಂಗೇರಿಯ ಬಿಜಿಎಸ್ ಆಸ್ಪತ್ರೆ ಬಳಿ ಕಾರನ್ನು ಓವರ್ ಟೇಕ್ ಮಾಡಲು ಜಾಗ ಬಿಡಲಿಲ್ಲ ಎಂದು ಆಕ್ರೋಶಗೊಂಡ ನಾಲ್ವರು ಯುವಕರು ಊಬರ್ ಚಾಲಕನಿಗೆ ಥಳಿಸಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ. ಪ್ರವೀಣ್(30) ಹಲ್ಲೆಗೊಳಗಾದ ಊಬರ್ ಚಾಲಕ. ಪ್ರವೀಣ್ ಸ್ವಿಫ್ಟ್ ಕಾರಿನಲ್ಲಿ ಉತ್ತರಹಳ್ಳಿ ಮುಖ್ಯ ರಸ್ತೆಯಲ್ಲಿ ನಿನ್ನೆ ರಾತ್ರಿ ಹೋಗುತ್ತಿದ್ದರು. ಈ ವೇಳೆ ಇನೋವಾ ಕಾರಿನಲ್ಲಿ ಹಿಂದೆ ಬರುತ್ತಿದ್ದ ನಾಲ್ವರು ತಮ್ಮ ಕಾರು ಮುಂದೆ ಹೋಗಲು ಜಾಗ ಬಿಡಲಿಲ್ಲ ಎನ್ನುವ ಕಾರಣಕ್ಕೆ ಪ್ರವೀಣ್ ಕಾರನ್ನು ಅಡ್ಡಗಟ್ಟಿ ಜಗಳ ತೆಗೆದು ಹಲ್ಲೆ ನಡೆಸಿದ್ದಾರೆ. ಅಲ್ಲದೇ ಪ್ರವೀಣ್ ಅವರ ಸ್ವಿಫ್ಟ್ ಕಾರಿನ ಗ್ಲಾಸ್ ಪುಡಿ ಪುಡಿ ಮಾಡಿದ್ದಾರೆ. ಆರೋಪಿಗಳನ್ನು ಬಂಧಿಸಿರುವ ಕೆಂಗೇರಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

ubre Gang ಸ್ವಿಫ್ಟ್ ಆರೋಪಿ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ