ಮಾಂಗಲ್ಯಸರ ಕಸಿದು ಪರಾರಿಯಾದ ದುಷ್ಕರ್ಮಿಗಳು

Kannada News

03-05-2017

ಬೆಂಗಳೂರು, ಮೇ 3- ಕೆಂಪೇಗೌಡ ನಗರದ ಮೋರ್ ಮಾಲ್ ಹಿಂಭಾಗ ಕೆಲಸ ಮುಗಿಸಿಕೊಂಡು ಮನೆಗೆ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯೊಬ್ಬರ 1.5 ಲಕ್ಷ ರೂ. ಮೌಲ್ಯದ ಮಾಂಗಲ್ಯಸರವನ್ನು ಬೈಕ್‍ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಕಸಿದು ಪರಾರಿಯಾಗಿರುವ ಘಟನೆ ಮಂಗಳವಾರ ನಡೆದಿದೆ.
ಕೆಂಪೇಗೌಡ ನಗರದ ಜಯಶ್ರೀ ಅವರು ಮನೆಯ ಹತ್ತಿರದ ಬಿಎಸ್‍ಎನ್‍ಎಲ್ ಕಚೇರಿಯಲ್ಲಿ ಆಯಾ ಕೆಲಸ ಮಾಡುತ್ತಿದ್ದು, ನಿನ್ನೆ ಮಧ್ಯಾಹ್ನ 3ರ ವೇಳೆ ಕೆಲಸ ಮುಗಿಸಿಕೊಂಡು ಮನೆಗೆ ನಡೆದುಕೊಂಡು ಹೋಗುತ್ತಿದ್ದರು.
ಮೋರ್ ಮಾಲ್ ಹಿಂಭಾಗ ಹೋಗುವಾಗ ಕಪ್ಪು ಬಣ್ಣದ ಬೈಕ್‍ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಅವರ ಕತ್ತಿನಲ್ಲಿದ್ದ 55 ಗ್ರಾಂ ತೂಕದ ಮಾಂಗಲ್ಯಸರವನ್ನು ಕಸಿದು ಪರಾರಿಯಾಗಿದ್ದಾರೆ. ಪ್ರಕರಣ ದಾಖಲಿಸಿರುವ ಕೆಂಪೇಗೌಡ ನಗರದ ಪೊಲೀಸರು ದುಷ್ಕರ್ಮಿಗಳಿಗಾಗಿ ಶೋಧ ನಡೆಸಿದ್ದಾರೆ.

 

Links :
ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ