ವಿಷ ಸೇವಿಸಿ ಬಾಲಕ ಆತ್ಮಹತ್ಯೆ

A boy who consumed poison at the hostel

02-03-2018

ಚಿತ್ರದುರ್ಗ: ಹಾಸ್ಟೆಲ್ನಲ್ಲಿ ವಿಷ ಸೇವಿಸಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ, ಜಿಲ್ಲೆಯ ಹೊಸದುರ್ಗ ತಾಲ್ಲೂಕಿನ ಬೆಲಗೂರು ಗ್ರಾಮದ ಬಿಸಿಎಂ ಹಾಸ್ಟೆಲ್ ನಲ್ಲಿ ಬೆಳಕಿಗೆ ಬಂದಿದೆ. ಚಿಕ್ಕಮಗಳೂರಿನ ಚಿನುಕನಹಳ್ಳಿ ಗ್ರಾಮದ ಗುರುಪ್ರಸಾದ್ (14) ಅತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಸರ್ಕಾರಿ ಶಾಲೆಯಲ್ಲಿ 9ನೇ ತರಗತಿ ಓದುತ್ತಿದ್ದ ಬಾಲಕ ಅನಾರೋಗ್ಯದಿಂದ ಅತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಕಳೆದ ರಾತ್ರಿ ಹಾಸ್ಟೆಲ್ ನಲ್ಲಿ ವಿಷ ಕುಡಿದು ಅಸ್ವಸ್ಥಗೊಂಡಿದ್ದು, ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆಯೇ ಮೃತಪಟ್ಟಿದ್ದಾನೆ. ಶ್ರೀರಾಂಪುರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಸಂಬಂಧಿತ ಟ್ಯಾಗ್ಗಳು

Suicide Hostle ಅನಾರೋಗ್ಯ ಗ್ರಾಮ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ