ಜೆಡಿಎಸ್ ಪಕ್ಷಕ್ಕೆ ಸೇರ್ಪಡೆ

K.C.venkatesh joined JDS

03-03-2018

ಬೆಂಗಳೂರು: ಕಮ್ಮಗೊಂಡನಹಳ್ಳಿ ವಾರ್ಡಿನ ಮಾಜಿ ಕಾರ್ಪೋರೇಟರ್ ಹಾಗೂ ಬಿಜೆಪಿ ಮುಖಂಡ ಕೆ.ಸಿ.ವೆಂಕಟೇಶ್ ಅವರು ದೇವೇಗೌಡರ ಸಮ್ಮುಖದಲ್ಲಿ ಜೆಡಿಎಸ್ ಸೇರ್ಪಡೆಯಾಗಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ದೇವೇಗೌಡರು, ದಾಸರಹಳ್ಳಿ ಕ್ಷೇತ್ರದ ಅನೇಕ ಮುಖಂಡರು ನಮ್ಮ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ, ನಾವು ಒಗ್ಗಟ್ಟಾಗಿ ದಾಸರಹಳ್ಳಿ ವಿಧಾನಸಭಾ ಕ್ಷೇತ್ರವನ್ನು ಗೆಲ್ಲುತ್ತೇವೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. ದಾಸರಹಳ್ಳಿ ಕ್ಷೇತ್ರದಲ್ಲಿ ನಡೆದಿರುವ ಅವ್ಯವಹಾರಗಳ ಬಗ್ಗೆ ನನಗೆ ಗೊತ್ತು, ನಾನು ಎಲ್ಲವನ್ನೂ ಮಟ್ಟ ಹಾಕುತ್ತೇನೆ. ಮುಂದಿನ ದಿನಗಳಲ್ಲಿ ಇತರೆ ಪಕ್ಷಗಳಿಂದಲೂ ಬೆಂಗಳೂರಿನ ಅನೇಕರು ನಮ್ಮ ಪಕ್ಷಕ್ಕೆ ಸೇರ್ಪಡೆ ಆಗಲಿದ್ದಾರೆ ಎಂದರು.

ಕಾವೇರಿ ವಿಚಾರದ ಬಗ್ಗೆ ಯಾರನ್ನೂ ನಾನು ದೂರುವುದಿಲ್ಲ, ಎಲ್ಲರೂ ಒಗ್ಗಟ್ಟಾಗಿ ನಮ್ಮ ರಾಜ್ಯದ ಪರವಾಗಿ ಕೆಲಸ ಮಾಡಬೇಕು, ಈಗಾಗಲೇ ನೀರಾವರಿ ಸಚಿವರ ಜೊತೆ ಮಾತುಕತೆ ನಡೆಸಿದ್ದೇನೆ ಸಕಾರತ್ಮಕವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಕಾವೇರಿ ವಿಚಾರದಲ್ಲಿ ತಮಿಳುನಾಡಿನ ಕಡೆಯಿಂದಲೂ ಒತ್ತಡ ಇದೆ, ನಾವೆಲ್ಲರೂ ಪಕ್ಷ ಬೇಧ ಮರೆತು ನಮ್ಮ ರಾಜ್ಯದ ಹಿತಕ್ಕಾಗಿ ಶ್ರಮಿಸಬೇಕು ಎಂದು ಹೇಳಿದ ದೇವೇಗೌಡರು, ಲಿಂಗಾಯತ ಧರ್ಮದ ವಿಚಾರವಾಗಿ ಮುಂದಿನ ದಿನಗಳಲ್ಲಿ ಮಾತನಾಡುತ್ತನೆ ಎಂದರು.


ಸಂಬಂಧಿತ ಟ್ಯಾಗ್ಗಳು

JDS K.C.venkatesh ಲಿಂಗಾಯತ ಸೇರ್ಪಡೆ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ