'ಅಡಿಕೆ ಬೆಳೆಗಾರರನ್ನ ಸರ್ಕಾರ ಮರೆತಿದೆ’05-03-2018

ಶಿವಮೊಗ್ಗ: ಕಳೆದ ಲೋಕಸಭಾ ಚುನಾವಣೆಯಲ್ಲಿ ಅಡಿಕೆ ಬೆಳೆಗಾರರ ಹಿತಕಾಯುವುದಾಗಿ ಭರವಸೆ ನೀಡಿ ಅಧಿಕಾರಕ್ಕೆ ಬಂದು ಈಗ ತಮ್ಮ ಮಾತನ್ನೇ ಮರೆತಿದ್ದಾರೆ ಎಂದು, ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ರಮೇಶ್ ಹೆಗಡೆ ಆರೋಪಿಸಿದ್ದಾರೆ. ರಾಜ್ಯದ ಅಡಿಕೆ ಬೆಳೆಗಾರರ ಹಿತಕಾಯುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ. ಕೇಂದ್ರ ಸಚಿವೆ ಅನುಪ್ರಿಯ ಪಟೇಲ್ ಅವರು ಅಡಿಕೆ ಕ್ಯಾನ್ಸರ್ ಕಾರಕ ಎಂದು ಹೇಳಿಕೆ ನೀಡಿದ್ದು ಸರಿಯಲ್ಲ. ಬಿಜೆಪಿ ನಾಯಕರು ಅಡಿಕೆ ಬೆಳೆಗಾರರಿಗೆ ಮೋಸ ಮಾಡಿದ್ದಾರೆ. ಅಡಿಕೆ ಬೆಳೆಗಾರರ ವಿರೋಧಿ ದೋರಣೆ ಅನುಸರಿಸುತ್ತಿರುವ ಬಿಜೆಪಿ ಸಂಸದರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Anupriya Patel Tobaco ವಿಫಲ ಚುನಾವಣೆ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ