ಮಲ್ಯ ಆಸ್ಪತ್ರೆಯಿಂದ ವಿದ್ವತ್ ಡಿಸ್ಚಾರ್ಜ್

Vidwath discarge from malya hospital

05-03-2018

ಬೆಂಗಳೂರು: ಯುಬಿ ಸಿಟಿಯ ಫರ್ಜಿ ಕೆಫೆ ರೆಸ್ಟೊರೆಂಟ್‍ನಲ್ಲಿ ಶಾಸಕ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್‍ನಿಂದ ಹಲ್ಲೆಗೊಳಗಾಗಿ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ  ವಿದ್ವತ್ ಅವರು ಮಲ್ಯ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕಳೆದ 17 ದಿನಗಳಿಂದ ಮಲ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿದ್ವತ್ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡ ಹಿನ್ನೆಲೆಯಲ್ಲಿ ನಿನ್ನೆ ಮಧ್ಯರಾತ್ರಿ ಡಿಸ್ಚಾರ್ಜ್ ಮಾಡಿದ್ದು ಮನೆಗೆ ತೆರಳಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ವಿದ್ವತ್ ಕಣ್ಣಿಗೆ ಚಿಕಿತ್ಸೆ ಆಗತ್ಯವಿದ್ದು, ಆಯುರ್ವೇದಿಕ್ ಔಷಧಿ ಕೊಡಿಸಲು ಕೇರಳಕ್ಕೆ ಕರೆದುಕೊಂಡು ಹೋಗುವುದಾಗಿ ವಿದ್ವತ್ ಕುಟುಂಬಸ್ಥರು ತಿಳಿಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Nalapad Vidwath ಆಯುರ್ವೇದಿ ರೆಸ್ಟೊರೆಂಟ್‍ನ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ