ನೂತನ ಪಿಡಿಓಗಳಿಗೆ ಪಾಟೀಲ್ ಕಿವಿ ಮಾತು

H.K.Patil suggestions to new PDO

05-03-2018

ಬೆಂಗಳೂರು: ಈ ತಿಂಗಳ ಅಂತ್ಯದೊಳಗಾಗಿ ರಾಜ್ಯದ 25 ಜಿಲ್ಲೆಗಳು ಬಯಲು ಬಹಿರ್ದೆಸೆ ಮುಕ್ತ ಜಿಲ್ಲೆಗಳಾಗಲಿವೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಹೆಚ್.ಕೆ.ಪಾಟೀಲ್ ಹೇಳಿದ್ದಾರೆ.

ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳಾಗಿ ಮತ್ತು ಪಂಚಾಯ್ತಿಯ ‘ಎ’ ಗ್ರೇಡ್ ಕಾರ್ಯದರ್ಶಿಗಳಾಗಿ ನೇಮಕಗೊಂಡ 1624 ಮಂದಿಗೆ ವಿಧಾನಸೌಧ ಹಾಗೂ ವಿಕಾಸಸೌಧದ ನಡುವೆ ಇರುವ ಗಾಂಧಿ ಪ್ರತಿಮೆಯ ಬಳಿ ಪ್ರತಿಜ್ಞಾ ವಿಧಿ ಭೋಧಿಸಿದ ನಂತರ ಮಾತನಾಡಿದ ಅವರು, ರಾಜ್ಯದ ಇಪ್ಪತ್ತು ಜಿಲ್ಲೆಗಳು ಈಗಾಗಲೇ ಬಯಲು ಬಹಿರ್ದೆಸೆ ಮುಕ್ತ ಜಿಲ್ಲೆಗಳಾಗಿವೆ. ಈ ತಿಂಗಳ ಅಂತ್ಯದಲ್ಲಿ ಇನ್ನೂ ಐದು ಜಿಲ್ಲೆಗಳು ಬಯಲು ಬಹಿರ್ದೆಸೆ ಮುಕ್ತ ಜಿಲ್ಲೆಗಳಾಗಲಿವೆ ಎಂದು ಅವರು ಸ್ಪಷ್ಟ ಪಡಿಸಿದರು.

ಸ್ವತ: ಪ್ರಧಾನಿ ನರೇಂದ್ರಮೋದಿಯವರೇ ಕರ್ನಾಟಕದಲ್ಲಿ ಶೌಚಾಲಯಗಳ ನಿರ್ಮಾಣ ತ್ವರಿತಗತಿಯಲ್ಲಾಗುತ್ತಿರುವುದನ್ನು ಕಂಡು ಪ್ರಶಂಸಿಸಿದ್ದಾರೆ. ಮೂವತ್ನಾಲ್ಕು ಲಕ್ಷ ಶೌಚಾಲಯಗಳನ್ನು ನಾವು ನಿರ್ಮಿಸಿರುವ ಕುರಿತು ಬಹಿರಂಗವಾಗಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇದಲ್ಲದೆ ಗ್ರಾಮೀಣಾಭಿವೃದ್ಧಿಯ ವಿಷಯದಲ್ಲಿ ನಾವು ಸಾಧಿಸಿದ ಪ್ರಗತಿಯನ್ನು ಪರಿಗಣಿಸಿ ಕೇಂದ್ರ ಸರ್ಕಾರ ವಿವಿಧ ಪ್ರಶಸ್ತಿಗಳನ್ನು ನೀಡಿದೆ ಎಂದ ಅವರು, ಹೊಸತಾಗಿ ನೇಮಕಗೊಂಡವರು ಗ್ರಾಮ್ ಸ್ವರಾಜ್ ಅನ್ನು ತಮ್ಮ ಮಂತ್ರವನ್ನಾಗಿಸಿಕೊಂಡು ಕೆಲಸ ಮಾಡಬೇಕು ಎಂದು ಹೇಳಿದರು.

ಯಾವ ಕಾರಣಕ್ಕೂ ಭ್ರಷ್ಟಾಚಾರಕ್ಕೆ ಆಸ್ಪದ ನೀಡುವುದಿಲ್ಲ ಎಂದು ನೇಮಕಗೊಂಡವರಿಗೆ ಪ್ರತಿಜ್ಞಾ ವಿಧಿ ಭೋಧಿಸಲಾಗಿದೆ. ಅದನ್ನವರು ಗಮನದಲ್ಲಿಟ್ಟುಕೊಂಡರೆ ಒಳ್ಳೆಯದುಎಂದು ಕಿವಿ ಮಾತು ಹೇಳಿದರು. ಹಳ್ಳಿಗಳನ್ನು ಅಭಿವೃದ್ಧಿಪಡಿಸದೆ ನಾವು ತುಂಬ ಪ್ರಗತಿ ಸಾಧಿಸಿದ್ದೇವೆ ಎಂದು ಹೇಳಿಕೊಳ್ಳಲು ಸಾಧ್ಯವಿಲ್ಲ. ಹೀಗಾಗಿ ನೂತನವಾಗಿ ನೇಮಕಗೊಂಡವರು ಇದನ್ನು ಗಮನದಲ್ಲಿಟ್ಟುಕೊಂಡು ಕೆಲಸ ಮಾಡಿದರೆ ಮತ್ತಷ್ಟು ಪ್ರಗತಿ ಸಾಧ್ಯ ಎಂದರು.


ಸಂಬಂಧಿತ ಟ್ಯಾಗ್ಗಳು

H.K.Patil Rural development ಪ್ರಗತಿ ಸ್ವರಾಜ್


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ