ಕೆಎಸ್ಆರ್ಟಿಸಿಗೆ ಮತ್ತೊಂದು ಬಲಿ

KSRTC bus accident college student dies

05-03-2018

ಹಾಸನ: ಅರಕಲಗೂಡು ತಾಲ್ಲೂಕಿನ ವಿಜಾಪುರ ಕಾಲೋನಿ ಬಳಿ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಚೇತನ್(19) ಎಂಬ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಈತ ಜಿಲ್ಲೆಯ ಸಕಲೇಶಪುರದ ಹೆಡ್ಡಳ್ಳಿ ಗ್ರಾಮದವನಾಗಿದ್ದು, ಅರಕಲಗೂಡಿನ ಪ್ರಥಮ ದರ್ಜೆ ಕಾಲೇಜಿನಲ್ಲಿ ಓದುತ್ತಿದ್ದ ಎಂದು ತಿಳಿದು ಬಂದಿದೆ. ಬೈಕ್ ನಲ್ಲಿ ತೆರಳುವ ವೇಳೆ ಈ ದುರ್ಘಟನೆ ಸಂಭವಿಸಿದೆ. ಅರಕಲಗೂಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 


ಸಂಬಂಧಿತ ಟ್ಯಾಗ್ಗಳು

KSRTC Accident ಅರಕಲಗೂಡು ಪ್ರಥಮ ದರ್ಜೆ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ