ಮತ್ತೊಂದು ಹೀನಾಯ ಕೃತ್ಯ...

4 boys attempted to rape a girl in vijayapura

06-03-2018

ವಿಜಯಪುರ‌: ಜಿಲ್ಲೆಯಲ್ಲಿ ಮತ್ತೊಂದು ಅತ್ಯಾಚಾರ ಯತ್ನ ಘಟನೆ ಬೆಳಕಿಗೆ ಬಂದಿದೆ.‌ ಶಾಲೆಗೆ ಹೋಗುತ್ತಿದ್ದ 15 ವರ್ಷದ ಅಪ್ರಾಪ್ತೆಯನ್ನು ಬಾಳೆ ತೋಟಕ್ಕೆ ಎತ್ತೊಯ್ದ ನಾಲ್ವರು ಕಾಮುಕರು  ‌ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ಜಿಲ್ಲೆಯ ಮುದ್ದೇಬಿಹಾಳ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಶಾಲೆಗೆ ಹೋಗುತ್ತಿದ್ದ ಬಾಲಕಿಯನ್ನು ಎಳೆದೊಯ್ದ ಕಾಮುಕರು ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ, ಈ ವೇಳೆ ಬಾಲಕಿ ಕಿರುಚಾಟ ಕೇಳಿ ಸ್ಥಳೀಯರು ರಕ್ಷಣೆಗೆ ಧಾವಿಸಿದ್ದಾರೆ. ಸ್ಥಳಿಯರನ್ನು ಕಂಡು ಪರಾರಿಯಾದ ನಾಲ್ವರಲ್ಲಿ ಒಬ್ಬನು ಸಿಕ್ಕಿಬಿದ್ದಿದ್ದಾನೆ. ವೀರೇಶ ಕಂದಗಲ್‌(25) ನನ್ನು ಹಿಡಿದ ಸ್ಥಳೀಯರು ಹಿಗ್ಗಾಮುಗ್ಗ ಥಳಿಸಿದ್ದಾರೆ. ನಂತರ ಮುದ್ದೇಬಿಹಾಳ ಪೊಲೀಸರಿಗೆ ಕಾಮುಕನ್ನು ಒಪ್ಪಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತಪ್ಪಿಸಿಕೊಂಡಿರುವ ಮೂವರಿಗಾಗಿ ಶೋಧ ಕಾರ್ಯ ಕೈಗೊಂಡಿದ್ದಾರೆ. ಘಟನೆಯಿಂದ ಆಘಾತಗೊಂಡು ಪ್ರಜ್ಞೆ ತಪ್ಪಿದ ಬಾಲಕಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.


ಸಂಬಂಧಿತ ಟ್ಯಾಗ್ಗಳು

Rape ammature ಕಾಮುಕ ಸರ್ಕಾರಿ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ