ಪಂಚಾಯತಿ ಕಚೇರಿ ಮುಂದೆ ಶವವಿಟ್ಟು ಧರಣಿ

villagers protest against panchayath in gadag

06-03-2018

ಗದಗ: ಜಿಲ್ಲೆಯ ನರೇಗಲ್ ಪಟ್ಟಣದಲ್ಲಿ ನಿನ್ನೆ ಮಧ್ಯಾಹ್ನ ಈಜಲು ತೆರಳಿದ್ದ ಕಲ್ಮೇಶ್ (12) ಎಂಬ ಬಾಲಕ ಮೃತಪಟ್ಟಿದ್ದು, ಘಟನೆಗೆ ಪಟ್ಟಣ ಪಂಚಾಯತಿ ಸಿಬ್ಬಂದಿ ನಿರ್ಲಕ್ಷ್ಯವೇ ಕಾರಣ ಎಂದು ಪೋಷಕರು ಆರೋಪಿಸಿದ್ದಾರೆ. ಈ ಕುರಿತು ಗದಗ್ನ ಗಜೇಂದ್ರಗಡ ತಾಲ್ಲೂಕಿನ ನರೇಗಲ್ ಪಟ್ಟಣ ಪಂಚಾಯತಿ ಎದುರು ಬಾಲಕನ ಶವವಿಟ್ಟು ಪ್ರತಿಭಟಿಸಿದ್ದಾರೆ. ಕೆರೆಗೆ ಸೂಕ್ತ ನಾಮಫಲಕ ಮತ್ತು ತಡೆಗೋಡೆ ನಿರ್ಮಿಸಲು ಮೃತ ಬಾಲಕನ ಪೋಷಕರು ಒತ್ತಾಯಿಸಿದ್ದಾರೆ. ಕರೆಯಲ್ಲಿ ಮುಳುಗಿ ಸಾವನ್ನಪ್ಪಿದ್ದ ಬಾಲಕನ ಶವ ತಡರಾತ್ರಿ 1 ಗಂಟೆಗೆ ಪತ್ತೆಯಾಗಿದೆ. ಪಟ್ಟಣ ಪಂಚಾಯತಿ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Lake death ಆಕ್ರೋಶ ಪಂಚಾಯತಿ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ