'ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ'06-03-2018

ಬೀದರ್: ಅಶೋಕ್ ಖೇಣಿ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರಿಸಿಕೊಂಡದ್ದು ಭ್ರಷ್ಟಾಚಾರವನ್ನು ಬಿಗಿದಪ್ಪಿದಂತೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಕುಟುಕಿದ್ದಾರೆ. ನೈಸ್ ಹಗರಣ ಕುರಿತು ವಿಧಾನ ಮಂಡಲದಲ್ಲಿ ಚರ್ಚೆಗಳು ಸೇರಿದಂತೆ ಹೊರಗಡೆಯು ಹೋರಾಟಗಳು ನಡೆದಿವೆ.‌ ಕಾನೂನು ಸಚಿವ ಟಿ.ಬಿ.ಜಯಚಂದ್ರ ನೇತೃತ್ವದಲ್ಲಿ ತನಿಖೆ ನಡೆದಿದ್ದು, ವರದಿಯನ್ನೂ ನೀಡಲಾಗಿದೆ. ಇದೆಲ್ಲೆವೂ ಗೊತ್ತಿದ್ದರು ಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷರು ಅಶೋಕ್ ಖೇಣಿ ಅವರನ್ನ ಪಕ್ಷಕ್ಕೆ ಸೇರಿಸಿಕೊಂಡಿದ್ದಾರೆ ಎಂದು ಟೀಕಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ಇನ್ನು ಮುಂದೆ ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕತೆ ಕಳೆದುಕೊಂಡಿದ್ದಾರೆ.‌ ಅಶೋಕ್ ಖೇಣಿ ಅವರನ್ನು ಪಕ್ಷಕ್ಕೆ ಸೇರಿಸಿಕೊಂಡಿದ್ದೇವೆ ಹೊರತು ನೈಸ್ ಅನ್ನು ಅಲ್ಲ ಅನ್ನೋ ಪರಮೇಶ್ವರ್ ಹೇಳಿಕೆ ಹಾಸ್ಯಾಸ್ಪದ ಎಂದರು.

 


ಸಂಬಂಧಿತ ಟ್ಯಾಗ್ಗಳು

Ashok kheny NICE ಪರಮೇಶ್ವರ್ ಹೋರಾಟ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ