ಅಭಿವೃದ್ಧಿ ಪರ 'ಸೀದಾ ಸಾದಾ ರಾಮಯ್ಯ'06-03-2018

ಬೆಂಗಳೂರು: ಸಾವಿರಾರು ಕೋಟಿ ರೂಪಾಯಿ ವಂಚಿಸಿ ಹೊರ ದೇಶಗಳಲ್ಲಿ ಓಡಾಡುವ ಉದ್ಯಮಿಗಳಿಗೆ ಸಹಕಾರ ನೀಡುತ್ತಿರುವ ನರೇಂದ್ರ ಮೋದಿ ಅವರನ್ನು “ಡಾಲರ್ ಮೋದಿ” ಎಂದು ಹೆಸರಿಸಬಹುದಾಗಿದೆ ಎಂದು ಸಾರಿಗೆ ಸಚಿವ ಹೆಚ್.ಎಂ.ರೇವಣ್ಣ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೀದಾ ಸಾದಾ ಕೆಲಸ ಮಾಡುತ್ತಿರುವ ಅಭಿವೃದ್ಧಿ ಪರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸೀದಾ ರೂಪಯ್ಯ ಎಂದಿರುವುದು ಪ್ರಧಾನಿ ಸ್ಥಾನಕ್ಕೆ ಶೋಭೆ ತರುವುದಿಲ್ಲ. ನರೇಂದ್ರ ಮೋದಿಯವರು ರೂಪಾಯಿ ಮೌಲ್ಯವನ್ನು ಮರೆತಿರುವುದಕ್ಕೆ ಇದು ನಿದರ್ಶನ ಎಂದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿವೃದ್ಧಿ ಪರ “ಸೀದಾ ಸಾದಾ ರಾಮಯ್ಯ”. ಕಳೆದ ಐದು ವರ್ಷದಲ್ಲಿ ಕರ್ನಾಟಕ ರಾಜ್ಯವನ್ನು ಅಭೀವೃದ್ಧಿಯಲ್ಲಿ ನಂ.1 ರಾಜ್ಯ ಮಾಡಿರುವ ಕೀರ್ತಿ ಇವರಿಗೆ ಸಲ್ಲಬೇಕು ಎಂದು ತಿಳಿಸಿದರು.

ಪ್ರ್ರಧಾನಿ ನರೇಂದ್ರ ಮೋದಿ ಅವರು ಚುನಾವಣೆಗೆ ಮುನ್ನ ಕಪ್ಪು ಹಣ ತಂದು ತಲಾ 15 ಲಕ್ಷ ರೂ. ಹಣವನ್ನು ಬ್ಯಾಂಕ್ ಖಾತೆಗೆ ಜಮಾ ಮಾಡುವುದಾಗಿ ಸುಳ್ಳು ಭರವಸೆ ನೀಡಿ ದೇಶದ ಜನತೆಗೆ ದ್ರೋಹವೆಸಗಿದ್ದಾರೆ ಎಂದು ಆರೋಪಿಸಿದರು. ಪ್ರಧಾನಿ ಹುದ್ದೆಯ ಘನತೆಯನ್ನು ಅರಿಯದ ಮೋದಿಯವರು ಅರಳಿ ಕಟ್ಟೆ ಚರ್ಚೆಯಂತೆ ಯಾವುದೇ ದಾಖಲೆಗಳಿಲ್ಲದೆ ಆರೋಪ ಮಾಡುವುದರಲ್ಲಿ ನಿಸ್ಸೀಮರು. ಬಿಜೆಪಿಯ ನಾಯಕರು ಎಷ್ಟೇ ಪ್ರಯತ್ನ ಮಾಡಿದರೂ ಕರ್ನಾಟಕದ ಮತದಾರರು ಕಾಂಗ್ರೆಸ್‍ನ ಜನಪರ ಕಾರ್ಯಗಳನ್ನು ಮರೆಯುವುದಿಲ್ಲ. ಕಾಂಗ್ರೆಸ್ ಸರ್ಕಾರದ ಸೇವೆಗೆ ತಕ್ಕ ಆಶೀರ್ವಾದವನ್ನು ಮತದಾರರು ಮಾಡಲಿದ್ದಾರೆ. ಮತ್ತೊಮ್ಮೆ ಕಾಂಗ್ರೆಸ್ ಜಯಭೇರಿ ಖಚಿತ ಎಂಬ ವಿಶ್ವಾಸ ವ್ಯಕ್ತಪಡಿಸಿದರು.


ಸಂಬಂಧಿತ ಟ್ಯಾಗ್ಗಳು

H.m.revanna narendra modi ದಾಖಲೆ ಆಶೀರ್ವಾದ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ