ಕಾಂಗ್ರೆಸ್ ವಿರುದ್ಧ ಜಾವಡೇಕರ್ ಆರೋಪ

Prakash Javadekar is seriously allegation on congress

06-03-2018

ಬೆಂಗಳೂರು: ಕರ್ನಾಟಕ ಮಕ್ಕಳ ಪಕ್ಷದ ಶಾಸಕ ಮತ್ತು ಭಾರೀ ಉದ್ಯಮಿ ಅಶೋಕ್ ಖೇಣಿ ಅವರನ್ನು ಪಕ್ಷಕ್ಕೆ ಬರಮಾಡಿಕೊಳ್ಳುವ ಮೂಲಕ ಕಾಂಗ್ರೆಸ್ ಭ್ರಷ್ಟಾಚಾರಕ್ಕೆ ಬೆಂಬಲ ನೀಡುವುದನ್ನು ಮತ್ತೊಮ್ಮೆ ಸಾಬೀತುಪಡಿಸಿದೆ ಎಂದು ಕೇಂದ್ರ ಸಚಿವ ಮತ್ತು ರಾಜ್ಯ ವಿಧಾನಸಭಾ ಚುನಾವಣೆಯ ಬಿಜೆಪಿ ಉಸ್ತುವಾರಿ ಪ್ರಕಾಶ್ ಜಾವಡೇಕರ್ ಗಂಭೀರ ಆರೋಪ ಮಾಡಿದ್ದಾರೆ.

ದೆಹಲಿಯಲ್ಲಿಂದು ಸಂಸತ್ ಭವನದ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೈಸ್ ಯೋಜನೆಯ ಅಕ್ರಮಗಳ ಹಿನ್ನೆಲೆಯಲ್ಲಿ ಇದುವರೆಗೂ ಕಾಂಗ್ರೆಸ್ ಪಕ್ಷ ಖೇಣಿ ಅವರ ಬಗ್ಗೆ ಟೀಕೆ ಮಾಡುತ್ತಿತ್ತು, ಖೇಣಿ ಅವರನ್ನು ಜೈಲಿನಲ್ಲಿಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಅನೇಕ ಬಾರಿ ಹೇಳಿದ್ದರು, ಈಗ ಖೇಣಿ ಅವರನ್ನು ಪಕ್ಷಕ್ಕೆ ಸೇರಿಸಿಕೊಂಡಿದ್ದಾರೆ, ಇದರಿಂದ ಕಾಂಗ್ರೆಸ್‍ನ ಇಬ್ಬಗೆಯ ನೀತಿ ಬಹಿರಂಗಗೊಂಡಿದೆ ಎಂದರು.

ಕಾಂಗ್ರೆಸ್ ಶಾಸಕರು ಮತ್ತು ಅವರ ಸಂಬಂಧಿಕರ ದುರ್ವರ್ತನೆಗಳಿಂದ ಕರ್ನಾಟಕದಲ್ಲಿ ಗೂಂಡಾರಾಜ್ ಪರಿಸ್ಥಿತಿ ಉಂಟಾಗಿದೆ. ಜನವಿರೋಧಿ, ರೈತವಿರೋಧಿ, ಭ್ರಷ್ಟ ಕಾಂಗ್ರೆಸ್ ಸರ್ಕಾರವನ್ನು ಕಿತ್ತೊಗೆಯಲು ಕರ್ನಾಟಕದ ಮತದಾರರು ಸಜ್ಜಾಗಿದ್ದಾರೆ, ಈಶಾನ್ಯ ರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶದ ನಂತರ ದೇಶದಲ್ಲಿ ರಾಜಕೀಯ ವಾತಾವರಣ ಬದಲಾಗುತ್ತಿದೆ, ಕರ್ನಾಟಕದಲ್ಲೂ ಬಿಜೆಪಿ ಆಯ್ಕೆಯಾಗಲಿದೆ ಎಂದು ಜಾವಡೇಕರ್ ವಿಶ್ವಾಸ ವ್ಯಕ್ತಪಡಿಸಿದರು.


ಸಂಬಂಧಿತ ಟ್ಯಾಗ್ಗಳು

prakash javdekar Ashok Kheny ಮತದಾರ ರಾಜಕೀಯ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ