ರಾಜಾತಿಥ್ಯ ನೀಡಲು ಹೇಳಿರಲಿಲ್ಲ…!07-03-2018

ಬೆಂಗಳೂರು: ಅಕ್ರಮ ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹದಲ್ಲಿರುವ ಶಶಿಕಲಾ ನಟರಾಜನ್ ಗೆ ರಾಜಾತಿಥ್ಯ ನೀಡುವಂತೆ ಬಂದೀಖಾನೆ ಇಲಾಖೆಯ ಅಂದಿನ ಡಿಜಿಪಿಗೆ ನಾನು ಸೂಚನೆ ನೀಡಿರಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಮುಖ್ಯಮಂತ್ರಿ ಸೂಚನೆ ಮೇರೆಗೆ ಶಶಿಕಲಾ ಅವರಿಗೆ ಹಾಸಿಗೆ, ದಿಂಬಿನ ಸೌಲಭ್ಯ ಒದಗಿಸಿದ್ದಾಗಿ ನಿವೃತ್ತ ಡಿಜಿಪಿ ಸತ್ಯನಾರಾಯಣರಾವ್ ನೀಡಿರುವ ಹೇಳಿಕೆ ಸುಳ್ಳು ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಶಶಿಕಲಾ ಅವರಿಗೆ ಜೈಲಿನಲ್ಲಿ ಮೂಲ ಸೌಕರ್ಯಗಳನ್ನೂ ಒದಗಿಸಿಲ್ಲ ಎಂದು ತಮಿಳುನಾಡಿನ ಒಂದು ನಿಯೋಗ ತಮ್ಮ ಕಚೇರಿಗೆ ಬಂದು ದೂರು ನೀಡಿತ್ತು. ಈ ಹಿನ್ನೆಲೆಯಲ್ಲಿ ಕಾನೂನು ರೀತಿಯಲ್ಲಿ ಹಾಗೂ ಜೈಲಿನ ಮ್ಯಾನುಯಲ್ ಪ್ರಕಾರ ಒದಗಿಸಬೇಕಾದ ಸೌಲಭ್ಯಗಳನ್ನು ಮಾತ್ರ ಶಶಿಕಲಾ ಅವರಿಗೆ ಕೊಡುವಂತೆ ಸತ್ಯನಾರಾಯಣರಾವ್ ಅವರಿಗೆ ಸೂಚಿಸಲಾಗಿತ್ತು. ಆದರೆ, ರಾಜಾತಿಥ್ಯ ಒದಗಿಸುವಂತೆ ಹೇಳಿರಲಿಲ್ಲ ಎಂದು ಮುಖ್ಯಮಂತ್ರಿ ಸ್ಪಷ್ಟಪಡಿಸಿದ್ದಾರೆ. ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನಡೆದಿದೆ ಎನ್ನಲಾಗಿರುವ ಅವ್ಯವಹಾರಗಳ  ಬಗ್ಗೆ ತನಿಖೆಯನ್ನು ಎಸಿಬಿಗೆ ವಹಿಸಲಾಗಿದೆ, ಹೀಗಾಗಿ ಸತ್ಯನಾರಾಯಣರಾವ್ ಅವರು ತಮ್ಮ ವಿರುದ್ಧ ಆಧಾರ ರಹಿತ ಆರೋಪ ಮಾಡಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.


ಸಂಬಂಧಿತ ಟ್ಯಾಗ್ಗಳು

V.K.Sasikala prision ಕಾರಾಗೃಹ ಸಿದ್ದರಾಮಯ್ಯ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ