ತೊಂದರೆ ಕೊಡದ ಹಾಗೆ ಯಾತ್ರೆ ಮಾಡಿ07-03-2018

ಬೆಂಗಳೂರು: ಪದ್ಮನಾಭ ನಗರ ಕ್ಷೇತ್ರದಲ್ಲಿ ಜೆಡಿಎಸ್ ಪಾದಯಾತ್ರೆ ಹಮ್ಮಿಕೊಂಡಿದ್ದು, ಯಡಿಯೂರು ಕೆರೆ ಬಳಿಯ ಗಣೇಶ ದೇವಸ್ಥಾನದಿಂದ ಯಾತ್ರೆ ಆರಂಭವಾಗಿದೆ. ಈ ವೇಳೆ ಮಾತನಾಡಿದ ಹೆಚ್.ಡಿ.ಕುಮಾರ ಸ್ವಾಮಿ, ಬಿಜೆಪಿಯವರು ಯಾವುದೋ ವಿಷಯ ಇಟ್ಟುಕೊಂಡು ಬೆಂಗಳೂರು ರಕ್ಷಿಸಿ ಎಂದು ಪಾದಯಾತ್ರೆ ನಡೆಸುತ್ತಿದ್ದಾರೆ, ಅವರು ಪಾದಯಾತ್ರೆ ಮಾಡುತ್ತಾರೆ ಎಂಬ ಕಾರಣಕ್ಕಾಗಿ ನಾವೂ ಪಾದಯಾತ್ರೆ ಮಾಡಿ, ಜನರಿಗೆ ತೊಂದರೆ ಕೊಡುವುದು ಬೇಡ. ಅಭ್ಯರ್ಥಿಗಳು ಮನೆ ಮನೆಗೆ ತೆರಳಿ ಪ್ರಚಾರ ಮಾಡಬೇಕು, ರಸ್ತೆಯಲ್ಲಿ ಯಾತ್ರೆ ಮಾಡಿ ಜನತೆಗೆ ತೊಂದರೆ ಕೊಡಬಾರದು ಎಂದು ಜೆಡಿಎಸ್ ಅಭ್ಯರ್ಥಿಗಳಿಗೆ, ಮುಖಂಡರಿಗೆ ಕಿವಿ ಮಾತು ಹೇಳಿದ್ದಾರೆ. ಯಾರಿಗೂ ತೊಂದರೆ ಆಗದ ರೀತಿಯಲ್ಲಿ ಮನೆ ಮನೆಗೆ ಹೋಗಿ, ನಮ್ಮ ಕಾಲದಲ್ಲಿ ಆದ ಅಭಿವೃದ್ಧಿ ಕಾರ್ಯದ ಬಗ್ಗೆ ಜನರಿಗೆ ತಿಳಿಸಿ ಎಂದು ಕುಮಾರ ಸ್ವಾಮಿ ಹೇಳಿದ್ದಾರೆ.


ಸಂಬಂಧಿತ ಟ್ಯಾಗ್ಗಳು

H.D.kumaraswamy padayatre ಅಭಿವೃದ್ಧಿ ಪ್ರಚಾರ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ