ಬಿಜೆಪಿ ಆರೋಪಗಳಿಗೆ ಕಾಂಗ್ರೆಸ್ ತಿರುಗೇಟು07-03-2018

ಬೆಂಗಳೂರು: ಬೆಂಗಳೂರು ರಕ್ಷಿಸಿ ಅಂತ ಬಿಜೆಪಿಯವರು ಪಾದಯಾತ್ರೆ ಮಾಡುತ್ತಿದ್ದಾರೆ, ನಾವು ಬಿಜೆಪಿಯವರಿಂದ ಬೆಂಗಳೂರು ನಗರವನ್ನು ರಕ್ಷಿಸಿದ್ದೇವೆ, ಬಿಜೆಪಿ ಅವಧಿಯಲ್ಲಿ ಬಿಬಿಎಂಪಿಯಲ್ಲಿ 8.5 ಸಾವಿರ ಕೋಟಿ ರೂ. ಸಾಲ ಮಾಡಿದ್ದರು, ನಾವು ಆಡಳಿತಕ್ಕೆ ಬಂದ ಮೇಲೆ ಈ ಸಾಲ ತೀರಿಸುತ್ತಿದ್ದೇವೆ, ಬಿಜೆಪಿಯವರು ಬಿಬಿಎಂಪಿಯ 6 ಕಟ್ಟಡಗಳನ್ನು ಅಡವಿಟ್ಟಿದ್ದರು, ನಾವು ಬಂದ ಮೇಲೆ ನಾಲ್ಕು ಕಟ್ಟಡಗಳನ್ನು ಬಿಡಿಸಿಕೊಂಡಿದ್ದೇವೆ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಬಿಜೆಪಿ ಆರೋಪಗಳಿಗೆ ತಿರುಗೇಟು ನೀಡಿದ್ದಾರೆ.

ಬೆಂಗಳೂರಿನ ರಸ್ತೆಗಳ ಅಭಿವೃದ್ಧಿ ಮಾಡಿದವರು ನಾವು, ಮಳೆಗಾಲದ ವೇಳೆ ನಗರದ ರಸ್ತೆಗಳು ಗುಂಡಿ ಬಿದ್ದಿದ್ದುಂಟು, ಈಗ ನಗರದ ಎಲ್ಲ ರಸ್ತೆಗಳನ್ನೂ ದುರಸ್ತಿ ಮಾಡಿದ್ದೇವೆ, ರಸ್ತೆಗಳು ಸುಸ್ಥಿತಿಯಲ್ಲಿವೆ. ಬಿಜೆಪಿ ಅವಧಿಯಲ್ಲಿ ಅನೇಕ ಹಗರಣಗಳು ನಡೆದಿದ್ದವು ಈ ಸಂಬಂಧ ತನಿಖೆ ಪ್ರಗತಿಯಲ್ಲಿದೆ. ಬಿಜೆಪಿಯವರ ವಿರುದ್ಧ ನಾವೂ ಕೂಡ ಚಾರ್ಜ್ ಶೀಟ್ ಸಿದ್ಧ ಮಾಡುತ್ತಿದ್ದೇವೆ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಯೋಗಿ ಆದಿತ್ಯನಾಥ್ ಅವರು, ನಮ್ಮ ರಾಜ್ಯದ ಕಾನೂನು ಸುವ್ಯವಸ್ಥೆ ಬಗ್ಗೆ ಮಾತನಾಡುತ್ತಾರೆ. ಆದರೆ, ಉತ್ತರ ಪ್ರದೇಶದಲ್ಲಿನ ಕಾನೂನು ಮತ್ತು ಸುವ್ಯವಸ್ಥೆ ಯಾವ ರೀತಿ ಇದೆ ಅನ್ನುವುದು ಎಲ್ಲರಿಗೂ ಗೊತ್ತಿದೆ ಎಂದು ರಾಮಲಿಂಗಾ ರೆಡ್ಡಿ ವಾಗ್ದಾಳಿ ನಡೆಸಿದರು.


ಸಂಬಂಧಿತ ಟ್ಯಾಗ್ಗಳು

Ramalinga reddy yogi adiyta nath ಬೆಂಗಳೂರು ಮಳೆಗಾಲ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ