‘ಭದ್ರತಾ ಲೋಪಕ್ಕೆ ಕಾರಣರಾದವರ ವಿರುದ್ಧ ಕ್ರಮ’08-03-2018

ಕಲಬುರ್ಗಿ: ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿ ಅವರಿಗೆ ಚಾಕು ಇರಿತ ಪ್ರಕರಣ ಕುರಿತು, ಗೃಹ ಇಲಾಖೆ ಸಚಿವ, ಆರೋಪಿ ವಿರುದ್ಧ ಈಗಾಗಲೇ ಕ್ರಮಕೈಗೊಳ್ಳಲಾಗಿದೆ. ಮೆಟಲ್ ಡಿಟೆಕ್ಟರ್ ಕೈಕೊಟ್ಟ ಹಿನ್ನೆಲೆ ಆರೋಪಿ ಚಾಕು ತೆಗೆದುಕೊಂಡು ಹೋಗಿದ್ದಾನೆ. ಭದ್ರತೆ ವೈಫಲ್ಯಕ್ಕೆ ಕಾರಣರಾದವರ ವಿರುದ್ಧ ಕ್ರಮಕ್ಕೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್.ಐ.ಟಿ ತನಿಖೆ ನಡೆಸುತ್ತಿದೆ ಅದರಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದಿದ್ದಾರೆ. ಇನ್ನು ತಮ್ಮ ಪುತ್ರಿ ಜಯನಗರ ಕ್ಷೇತ್ರದಿಂದ ಸ್ಪರ್ಧೆ ವಿಚಾರದ ಕುರಿತು, ಮಗಳಿಗೆ ಅರ್ಹತೆ ಇದ್ದರೆ ಟಿಕೆಟ್ ಕೊಡಲಿ, ಈಗಾಗಲೇ ಟಿಕೆಟ್ ಗಾಗಿ ಅರ್ಜಿ ಹಾಕಿದ್ದಾಳೆ. ಟಿಕೆಟ್ ಕೊಡೋದು ಬಿಡೋದು ಹೈಕಮಾಂಡ್ ಗೆ ಬಿಟ್ಟದ್ದು ಎಂದಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Ramalinga reddy lokayukta ವೈಫಲ್ಯ ಹೈಕಮಾಂಡ್


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ