ಕಾವೇರಿ: ವಿಧಾನಸೌಧದಲ್ಲಿ ಮಹತ್ವದ ಸಭೆ

Cauvery water issue: important meeting in vidhana soudha

08-03-2018

ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ಕುರಿತ ಸುಪ್ರೀಂ ಕೋರ್ಟ್ ತೀರ್ಪಿನ ಹಿನ್ನೆಲೆ ವಿಧಾನಸೌಧದಲ್ಲಿ ಸಂಜೆ ನಡೆಯಲಿರುವ ಸಭೆಗೆ ವಿವಿಧ ನಾಯಕರು ಸೇರಿದಂತೆ, ಕಾವೇರಿ ಸಮಸ್ಯೆ ಬಗ್ಗೆ ಸಾಕಷ್ಟು ತಿಳಿದಿರುವ ಮಾಜಿ ಪ್ರಧಾನಿ ದೇವೇಗೌಡರಿಗೆ ಸಿಎಂ ಸಿದ್ದರಾಮಯ್ಯ ಆಹ್ವಾನ ನೀಡಿದ್ದಾರೆ.

ವಿಧಾನಸಭೆ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್, ಮೇಲ್ಮನೆ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ, ಜೆಡಿಎಸ್ ನಾಯಕರಾದ ಹೆಚ್.ಡಿ.ಕುಮಾರಸ್ವಾಮಿ, ಮೇಲ್ಮನೆಯ ಜೆಡಿಎಸ್ ನಾಯಕ ಬಸವರಾಜ ಹೊರಟ್ಟಿ, ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್, ಜಲಸಂಪನ್ಮೂಲ ಇಲಾಖೆ ಪ್ರಧಾನಕಾರ್ಯದರ್ಶಿಗಳು, ಸರ್ಕಾರದ ಮುಖ್ಯಕಾರ್ಯದರ್ಶಿ ರತ್ನಪ್ರಭಾ ಭಾಗಿಯಾಗಲಿದ್ದಾರೆ. ಸಭೆಯಲ್ಲಿ ಕಾವೇರಿ ನದಿ ನೀರು ಹಂಚಿಕೆ ಕುರಿತ ಕಾನೂನು ಹೋರಾಟದ ಬಗ್ಗೆ, ನ್ಯಾಯಾಧಿಕರಣದ ಮುಂದೆ ಮತ್ತೆ ಪ್ರಸ್ತಾವನೆ, ನಿಯಂತ್ರಣ ಮಂಡಳಿ ರಚನೆಗೆ ವಿರೋಧ ಕುರಿತು ದೇವೇಗೌಡರಿಂದ ಸಲಹೆಗಳನ್ನು ಪಡೆಯಲಿದ್ದಾರೆ.


ಸಂಬಂಧಿತ ಟ್ಯಾಗ್ಗಳು

H.D. Deve Gowda siddaramaiah ಪ್ರತಿಪಕ್ಷ water resource


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


Muchas gracias. ?Como puedo iniciar sesion?
  • feilxnfhjc
  • forkkxgajm