ಸ್ಕ್ರೀನಿಂಗ್ ಕಮಿಟಿ ಮುಂದೆ ಟಿಕೆಟ್ ಆಕಾಂಕ್ಷಿಗಳು...

congress Ticket aspirants ahead of the Screening Committee

08-03-2018

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ, ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಗೆ ಎಐಸಿಸಿ ಚಾಲನೆ ನೀಡಿದೆ. ಈ ಸಂಬಂಧ ಕಾಂಗ್ರೆಸ್ ಹಿರಿಯ ಮುಖಂಡ ಮಧುಸೂಧನ್ ಮಿಸ್ತ್ರಿ ನೇತೃತ್ವದ ಸ್ಕ್ರೀನಿಂಗ್ ಕಮಿಟಿ ರಾಜ್ಯಕ್ಕೆ ಆಗಮಿಸಿದೆ. ನಗರದ ಕೆಪಿಸಿಸಿ ಕಚೇರಿಯಲ್ಲಿ ನಡೆದ ಮೊದಲ ಸಭೆಯಲ್ಲಿ, ಟಿಕೆಟ್ ಆಕಾಂಕ್ಷಿಗಳ ಜೊತೆಗೆ ಮಾತುಕತೆ ನಡೆಸಿದ್ದಾರೆ.

ಟಿಕೆಟ್ ಆಕಾಂಕ್ಷಿಗಳಿಂದ ಪಕ್ಷ ನಿಷ್ಠೆ, ಸಾರ್ವಜನಿಕ ಜೀವನ, ರಾಜಕೀಯ ಹಿನ್ನೆಲೆ ಕುರಿತ ವಿವರಣೆ ಪಡೆಯುತ್ತಿದ್ದಾರೆ. ಆಕಾಂಕ್ಷಿಗಳ ಅಹವಾಲು ಸ್ವೀಕರಿಸುತ್ತಿರುವ ಮಿಸ್ತ್ರಿ ನೇತೃತ್ವದ ಸ್ಕ್ರೀನಿಂಗ್ ಕಮಿಟಿ, ನಾಳೆಯವರೆಗೂ ರಾಜ್ಯದಲ್ಲಿ ನಿರಂತರ ಸಭೆ ನಡೆಸಲಿದೆ. ಕಳೆದ ಬಾರಿ ಚುನಾವಣೆ ಉಸ್ತುವಾರಿ ವಹಿಸಿದ್ದ ಮಧುಸೂಧನ್ ಮಿಸ್ತ್ರಿ, ಗೊಂದಲಗಳಿಗೆ ಅವಕಾಶ ನೀಡದಂತೆ ಟಿಕೆಟ್ ಫೈನಲ್ ಮಾಡಿದ್ದರು. ಈ ವಿಚಾರದಲ್ಲಿ ಚಾಕಚಕ್ಯತೆ ಮೆರೆದಿದ್ದ ಮಿಸ್ತ್ರಿಗೆ ಸ್ಕ್ರೀನಿಂಗ್ ಕಮಿಟಿ ಜವಾಬ್ದಾರಿಯನ್ನು ಈ ಬಾರಿಯೂ ವಹಿಸಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ