ಸರ್ಕಾರಕ್ಕೆ ವಕೀಲರ ಎಚ್ಚರಿಕೆ..!

Advocate warns government...!

08-03-2018

ಬೆಂಗಳೂರು: ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿ ಅವರ ಕೊಲೆ ಯತ್ನವನ್ನು ಖಂಡಿಸಿ  ರಾಜ್ಯದಲ್ಲಿ ಹದಗೆಟ್ಟಿರುವ ಕಾನೂನು ಸುವ್ಯವಸ್ಥೆಯನ್ನು ಸರಿಪಡಿಸುವಂತೆ  ರಾಜ್ಯ ಸರ್ಕಾರವನ್ನು ಆಗ್ರಹಿಸಿ ವಕೀಲರುಗಳು ಪ್ರತಿಭಟನೆ ನಡೆಸಿದರು.

ಸಿಟಿ ಸಿವಿಲ್ ನ್ಯಾಯಾಲಯದ ಆವರಣದಲ್ಲಿ ವಕೀಲರ ಸಂಘದ ಅಧ್ಯಕ್ಷ ಎ.ಪಿ. ರಂಗನಾಥ್ ಅವರ ನೇತೃತ್ವದಲ್ಲಿ ಸೇರಿದ ನೂರಾರು ಮಂದಿ ವಕೀಲರುಗಳು ಪ್ರತಿಭಟನೆ ನಡೆಸಿ ನ್ಯಾಯಾಧೀಶರು ನ್ಯಾಯವಾದಿಗಳಿಗೆ ಸೂಕ್ತ ರಕ್ಷಣೆ ನೀಡುವಂತೆ ಒತ್ತಾಯಿಸಿದರು. ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿ ಅವರ ಕೊಲೆ ಯತ್ನ, ಇನ್ನಿತರ ಪ್ರಕರಣಗಳಿಂದ ರಾಜ್ಯದಲ್ಲಿ ಕಾನೂನುವ್ಯವಸ್ಥೆ ಸಂಪೂರ್ಣ ಹದಗೆಟ್ಟಿರುವುದು ತೋರುತ್ತದೆ ಎಂದು ದೂರಿದರು. ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿ ಅವರಿಗೆ ಸೂಕ್ತ ಭದ್ರತೆಯನ್ನು ರಾಜ್ಯ ಸರ್ಕಾರ ಒದಗಿಸಿದ್ದರೆ ಕೊಲೆ ಯತ್ನ ಪ್ರಕರಣವನ್ನು ತಪ್ಪಿಸಬಹುದು. ರಾಜ್ಯ ಸರ್ಕಾರ ನಿರ್ಲಕ್ಷ್ಯದಿಂದಲೇ ಇಂತಹ ಘೋರ ಅನಾಹುತ ನಡೆದಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ವಿಚಾರಣೆ ನಡೆಸುವ ನ್ಯಾಯಾಧೀಶರು ಕಕ್ಷಿದಾರರ ಪರ ವಿರೋಧ ವಾದ ಮಂಡಿಸುವ ವಕೀಲರುಗಳಿಗೂ ರಕ್ಷಣೆ ಅಗತ್ಯವಿದ್ದು, ಕೂಡಲೇ ಸರ್ಕಾರ ನ್ಯಾಯಾಂಗದ ಎಲ್ಲ ಅಧಿಕಾರಿಗಳು, ವಕೀಲರುಗಳಿಗೂ ಸೂಕ್ತ ಭದ್ರತೆ ಒದಗಿಸಬೇಕೆಂದು ಎ.ಪಿ. ರಂಗನಾಥ್ ಆಗ್ರಹಿಸಿದರು. ನ್ಯಾಯವಾದಿಗಳು, ನ್ಯಾಯಾಧೀಶರುಗಳಿಗೆ ರಾಜ್ಯ ಸರ್ಕಾರ ಸೂಕ್ತ ಭದ್ರತೆ ಒದಗಿಸದಿದ್ದರೆ ನ್ಯಾಯಾಲಯಗಳನ್ನು ಬಂದ್ ಮಾಡಿ ಹೋರಾಟ ನಡೆಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು. ಪ್ರತಿಭಟನೆಯಲ್ಲಿ ವಕೀಲರ ಸಂಘದ ಪದಾಧಿಕಾರಿಗಳು ಪಾಲ್ಗೊಂಡಿದ್ದರು.


ಸಂಬಂಧಿತ ಟ್ಯಾಗ್ಗಳು

Lawyer govrnment ಪ್ರತಿಭಟನೆ ಎಚ್ಚರಿಕೆ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ