‘ಕಾಂಗ್ರೆಸ್ ಆಡಳಿತದಲ್ಲಿ ಅಭಿವೃದ್ಧಿ ಕುಂಠಿತ’



08-03-2018

ಬೆಂಗಳೂರು: ಕಳೆದ ನಾಲ್ಕೂವರೆ ವರ್ಷಗಳ ಕಾಂಗ್ರೆಸ್ ಆಡಳಿತಾವಧಿಯಲ್ಲಿ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಕುಂಠಿತಗೊಂಡಿವೆ ಎಂದು ಕೇಂದ್ರ ಸಾಂಖ್ಯಿಕ ಮತ್ತು ಕಾರ್ಯಕ್ರಮ ಅನುಷ್ಠಾನ ಸಚಿವ ಡಿ.ವಿ.ಸದಾನಂದಗೌಡ ಆರೋಪಿಸಿದ್ದಾರೆ. ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಇಂದು ನಡೆದ ಬೆಂಗಳೂರು ರಕ್ಷಿಸಿ ಪಾದಯಾತ್ರೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕಳೆದ ಆರು ದಿನಗಳಿಂದ ನಡೆಯುತ್ತಿರುವ ಪಾದಯಾತ್ರೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದರು.

ವಿಧಾನಸಭೆ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಆಡಳಿತಾವಧಿಯಲ್ಲಿ ಭ್ರಷ್ಟಾಚಾರ ಮಿತಿ ಮೀರಿದ್ದು, ಲೋಕಾಯುಕ್ತ ಸಂಸ್ಥೆಯನ್ನು ಮುಚ್ಚಲು ಕಾಂಗ್ರೆಸ್ ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಮಾಜಿ ಉಪ ಮುಖ್ಯಮಂತ್ರಿ ಆರ್. ಅಶೋಕ್ ಮಾತನಾಡಿ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ ಎಂದು ಆರೋಪಿಸಿದರು.



ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ