'ಮಹಿಳಾ ಮತದಾರರ ನೋಂದಣಿ ಪ್ರಮಾಣ ಹೆಚ್ಚಳ'

Increased in women

08-03-2018

ಬೆಂಗಳೂರು: ಕಳೆದ 2013ರ ಮತದಾರರ ಪಟ್ಟಿಗೆ ಹೋಲಿಸಿದರೆ ಈ ಬಾರಿ ಪಟ್ಟಿಯ ಪರಿಷ್ಕರಣೆಯಲ್ಲಿ ಮಹಿಳಾ ಮತದಾರರ ನೋಂದಣಿ ಪ್ರಮಾಣದಲ್ಲಿ ಶೇ.13ರಷ್ಟು ಹೆಚ್ಚಾಗಿದೆ ಎಂದು ರಾಜ್ಯದ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಹೇಳಿದ್ದಾರೆ.

ಮಾರತ್‍ಹಳ್ಳಿಯಲ್ಲಿಂದು ಆಯೋಜಿಸಿದ್ದ ವಾಕಥಾನ್‍ಗೆ ಚಾಲನೆ ನೀಡಿ ಮಾತನಾಡಿದ ಅವರು,  `18-19ರ ವಯೋಮಾನದ 7.72 ಲಕ್ಷ ಯುವ ಮತದಾರರು ಈ ವಿಶೇಷ ಪರಿಷ್ಕರಣೆ ಸಮಯದಲ್ಲಿ ನೋಂದಣಿ ಮಾಡಿಕೊಂಡಿದ್ದು, ಒಟ್ಟು 15.42 ಲಕ್ಷ ಮತದಾರರು ಸೇರ್ಪಡೆಯಾಗಿದ್ದಾರೆ. 2013ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿನ ಲಿಂಗಾನುಪಾತ 958 ಇದ್ದು ಈಗ 972ಕ್ಕೆ ಏರಿಕೆಯಾಗಿದೆ ಎಂದರು.

ಮುಂದಿನ ವಿಧಾನಸಭೆಯ ಚುನಾವಣೆಗೆ ಮಹಿಳೆಯರು ದೊಡ್ಡ ಸಂಖ್ಯೆಯಲ್ಲಿ ಮತದಾನ ಮಾಡಬೇಕು. 2018ರ ಪರಿಷ್ಕೃತ ಮತದಾರರ ಪಟ್ಟಿಯ ಪ್ರಕಾರ ಕರ್ನಾಟಕದಲ್ಲಿ 4,95,56,059 ಮತದಾರರಿದ್ದು ಅವರಲ್ಲಿ ಮಹಿಳೆಯರು 2,44,72,288 ಮಂದಿ ಮಹಿಳೆಯರೇ ಇದ್ದಾರೆ. ಬೆಂಗಳೂರಿನಲ್ಲಿ 41,92,706 ಮಹಿಳಾ ಮತದಾರರಿದ್ದಾರೆ. 46,04,190 ಪುರುಷ ಮತದಾರರಿದ್ದಾರೆ ಎಂದರು. 18 ವರ್ಷ ವಯೋಮಾನದ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನವರು ಮತದಾರರ ಪಟ್ಟಿಯಲ್ಲಿ ನೋಂದಣಿಯಾಗದೇ ಇದ್ದರೆ ನಾಮಪತ್ರಗಳನ್ನು ಸಲ್ಲಿಸುವ ಕೊನೆಯ ದಿನಾಂಕದವರೆಗೆ ಮತದಾರರು ತಮ್ಮ ಹೆಸರನ್ನು ಪಟ್ಟಿಯಲ್ಲಿ ಸೇರಿಸಬಹುದು ಎಂದು ಕಿವಿ ಮಾತು ಹೇಳಿದರು.

 


ಸಂಬಂಧಿತ ಟ್ಯಾಗ್ಗಳು

women voter ನಾಮಪತ್ರ ನೋಂದಣಿ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ