ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಸಿಹಿ ಸುದ್ದಿ

good news for women from central government

08-03-2018

ನವದೆಹಲಿ: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಗೆ ಕೇಂದ್ರ ಸರ್ಕಾರ ದೇಶದ ಮಹಿಳೆಯರಿಗೆ ಸಿಹಿ ಸುದ್ದಿಯೊಂದನ್ನು ನೀಡಿದೆ. ಅತ್ಯಂತ ಕಡಿಮೆ ಬೆಲೆಗೆ ಸ್ಯಾನಿಟರಿ ಪ್ಯಾಡ್‌ಗಳನ್ನು ಜನೌಷಧಿ ಕೇಂದ್ರಗಳಲ್ಲಿ ಮಾರಾಟ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. 2.50ರೂಪಾಯಿಗೆ ಒಂದು ಸ್ಯಾನಿಟರಿ ಪ್ಯಾಡ್ ಮಾರಾಟ ಮಾಡಲು ತೀರ್ಮಾನ ಕೈಗೊಂಡಿದೆ. ಇಂದಿನಿಂದ ದೇಶದ 3200 ಜನೌಷಧಿ ಕೇಂದ್ರಗಳಲ್ಲಿ, ಮಣ್ಣಿನಲ್ಲಿ ಕರಗುವ ಪರಿಸರ ಸ್ನೇಹಿ ಸ್ಯಾನಿಟರಿ ಪ್ಯಾಡ್‌ಗಳು ಲಭ್ಯವಾಗಲಿವೆ ಎಂದು ಸುದ್ದಿಗೋಷ್ಟಿಯಲ್ಲಿ ಕೇಂದ್ರ ಸಚಿವ ಅನಂತ ಕುಮಾರ್ ತಿಳಿಸಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ