ಅಪ್ರಾಪ್ತರ ಮದುವೆ ತಡೆದ ಅಧಿಕಾರಿಗಳು

child marriage stopped by officers in gulbarga

09-03-2018

ಕಲಬುರ್ಗಿ: ಅಪ್ರಾಪ್ತ ಬಾಲಕಿ ಮತ್ತು ಬಾಲಕನ ನಡುವೆ ನಡೆಯಬೇಕಿದ್ದ ಮದುವೆಯನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಶಿಶು ಅಭಿವೃದ್ಧಿ ಇಲಾಖೆ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ  ತಡೆದಿದ್ದಾರೆ. ಜಿಲ್ಲೆಯ ಜೇವರ್ಗಿ ತಾಲ್ಲೂಕಿನ ಕೆಲ್ಲೂರು ಗ್ರಾಮದಲ್ಲಿ ಘಟನೆ ಬೆಳಕಿಗೆ ಬಂದಿದೆ. 19 ವರ್ಷದ ಬಾಲಕನೊಂದಿಗೆ 15 ವರ್ಷದ ಬಾಲಕಿಯ ಮದುವೆಗೆ ಗ್ರಾಮದ ಚರಬಸವೇಶ್ವರ ದೇವಸ್ಥಾನದಲ್ಲಿ ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಈ ಕುರಿತು ಮಾಹಿತಿ ದೊರೆತ ಕೂಡಲೇ ಕಾರ್ಯಾಚರಣೆಗಿಳಿದ ಅಧಿಕಾರಿಗಳು ಮದುವೆ ನಿಲ್ಲಿಸಿದ್ದಾರೆ. ಬಾಲಕಿಯ ತಾಯಿ, ಸೋದರ ಮಾವ ಸೇರಿ ಐವರನ್ನು ವಶಕ್ಕೆ ಪಡೆದಿದ್ದಾರೆ. ಅಪ್ರಾಪ್ತ ಬಾಲಕಿಯನ್ನು ರಾಜ್ಯ ಮಹಿಳಾ ನಿಲಯಕ್ಕೆ ಕರೆದೊಯ್ದಿದ್ದಾರೆ. ಜೇವರ್ಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಸಂಬಂಧಿತ ಟ್ಯಾಗ್ಗಳು

ammature marrigae child marriage ಮದುವೆ ಮಹಿಳಾ ಇಲಾಖೆ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ