ಮಲ್ಯ ಆಸ್ಪತ್ರೆಗೆ ರಾಮಲಿಂಗಾರೆಡ್ಡಿ ಭೇಟಿ

Ramalinga Reddy Visited Mallya Hospital

09-03-2018

ಬೆಂಗಳೂರು: ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿ ಅವರಿಗೆ ಮಲ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಕಳೆದೆರಡು ದಿನಗಳಿಂದ ಐಸಿಯುನಲ್ಲಿ‌ ಚಿಕಿತ್ಸೆ ಪಡೆಯುತ್ತಿರುವ ನ್ಯಾ.ವಿಶ್ವನಾಥ್ ಅವರನ್ನು ಇಂದು ಸಂಜೆ ಐಸಿಯುನಿಂದ ಜನರಲ್ ವಾರ್ಡ್ಗೆ ಶಿಫ್ಟ್ ಮಾಡುವ ಸಾಧ್ಯತೆ ಇದೆ ಎನ್ನಲಾಗಿದ್ದು, ಅವರ ಆರೋಗ್ಯ ಸ್ಥಿತಿಯ ಆಧಾರದ ಮೇರೆಗೆ ವೈದ್ಯರು ನಿರ್ಣಯ ಕೈಗೊಳ್ಳಲಿದ್ದಾರೆ. ಸದ್ಯ ಚಿಕಿತ್ಸೆಗೆ ಸಕಾರಾತ್ಮಕವಾಗಿ ಸ್ಪಂಧಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ಇದೇ ವೇಳೆ ವಿಶ್ವನಾಥ ಶೆಟ್ಟಿ ಅವರ ಆರೋಗ್ಯ ವಿಚಾರಿಸಲು ಗೃಹ ಸಚಿವ ರಾಮಲಿಂಗಾರೆಡ್ಡಿ ಸೇರಿದಂತೆ, ನಗರ ಪೊಲೀಸ್ ಆಯುಕ್ತ ಟಿ.ಸುನೀಲ್ ಕುಮಾರ್ ಮತ್ತು ಕೇಂದ್ರ ವಿಭಾಗ ಡಿಸಿಪಿ ಚಂದ್ರಗುಪ್ತ ಅವರು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ