ಕನ್ನಡ ಧ್ವಜವೇ ಬೇರೆ ನಾಡ ಧ್ವಜವೇ ಬೇರೆ- ಸಿಎಂ09-03-2018

ಮೈಸೂರು: ನಾಡ ಧ್ವಜ ರೂಪಿಸಿ ಕೇಂದ್ರ ಸರ್ಕಾರಕ್ಕೆ ಕಳುಹಿಸಲಾಗಿದ್ದು, ಕೇಂದ್ರದ ಒಪ್ಪಿಗೆ ದೊರೆಯಬೇಕಿದೆ. ಧ್ವಜಕ್ಕೆ ಯಾರು ವಿರೋಧ ಮಾಡಿಲ್ಲ. ಕನ್ನಡ ಧ್ವಜವೇ ಬೇರೆ ನಾಡ ಧ್ವಜವೇ ಬೇರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ಪಿರಿಯಾಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಸಚಿವ ಎಚ್.ವಿಶ್ವನಾಥ್ ಜೆಡಿಎಸ್ ಮುಖಂಡರನ್ನು ‌ಸಂತೃಪ್ತಿ ಪಡಿಸಲು ಲೋಕಾಯುಕ್ತ ವಿಚಾರದಲ್ಲಿ ಸರ್ಕಾರವನ್ನು ಟೀಕಿಸಿದ್ದಾರೆ. ಅವರ ಹೇಳಿಕೆಗೆ ಮಹತ್ವ ನೀಡುವ ಅವಶ್ಯಕತೆ ಇಲ್ಲ ಎಂದುರು.

ರಾಜ್ಯಸಭಾ ಚುನಾವಣೆಯಲ್ಲಿ ಜೆಡಿಎಸ್ ನೆರವು ಪಡೆಯುವ ಅವಶ್ಯಕತೆ ನಮಗಿಲ್ಲ. ಇದರಿಂದ ಬಿಬಿಎಂಪಿಯಲ್ಲಿ ಜೆಡಿಎಸ್ ಮೈತ್ರಿಗೆ ಯಾವುದೇ ರೀತಿಯಲ್ಲಿ ಧಕ್ಕೆ ಆಗುವುದಿಲ್ಲ ಎಂದರು. ಇದೇ ವೇಳೆ ಹಾಸನ ಜಿಲ್ಲಾಧಿಕಾರಿ ವರ್ಗಾವಣೆ ವಿಚಾರದಲ್ಲಿ ಸರ್ಕಾರಕ್ಕೆ ಯಾವುದೇ ಮುಜುಗರ ಉಂಟಾಗಿಲ್ಲ ಎಂದು ಸಮರ್ಧಿಸಿಕೊಂಡಿದ್ದಾರೆ. ಕಾವೇರಿ ನಿರ್ವಹಣಾ ಮಂಡಳಿ ರಚನೆ ವಿಚಾರವಾಗಿ ಕಾನೂನು ತಜ್ಞರ ಅಭಿಪ್ರಾಯ ಪಡೆದು ಮುಂದುವರೆಯಲಾಗುವುದು ಎಂದರು. ವರುಣ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಸ್ತಿತ್ವದಲ್ಲಿಲ್ಲ, ಕುಮಾರಸ್ವಾಮಿ ಕುಮಾರ ಪರ್ವ ನಡೆಸಿದರೂ ಕ್ಷೇತ್ರದಲ್ಲಿ ಯಾವುದೇ ಪರಿಣಾಮ ಬೀರುವುದಿಲ್ಲ ಎಂದರು.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ