ಬಿಜೆಪಿಗೆ ಟಾಂಗ್ ಕೊಡಲು ಕೈ ಸಜ್ಜು..!

congress have planing to padayathara in bengaluru

09-03-2018

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ನೇತೃತ್ವದಲ್ಲಿ ಪದಾಧಿಕಾರಿಗಳ ಸಭೆ ನಡೆದಿದ್ದು, ಬಳಿಕ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, ಒಟ್ಟು 224 ಕ್ಷೇತ್ರದ ಪದಾಧಿಕಾರಿಗಳ ವರದಿಯನ್ನು ಗಣನೆಗೆ ತೆಗೆದುಕೊಳ್ಳಲಾಗಿದೆ. ಮುಂದೆ ಕ್ಷೇತ್ರದಲ್ಲಿ ಚುನಾವಣೆ ಲೆಕ್ಕಚಾರ ಹೇಗೆ ಅನ್ನೊ ಬಗ್ಗೆಯೂ ಚರ್ಚೆ ನಡೆದಿದೆ ಎಂದರು.

ಬೆಂಗಳೂರಿನ ಜನರಿಗೆ ಉತ್ತರ ಕೊಡಲು ಕಾಂಗ್ರೆಸ್ ಸಿದ್ಧವಾಗಿದೆ, ಸದ್ಯದಲ್ಲೇ 28 ಕ್ಷೇತ್ರದಲ್ಲೂ ಕಾರ್ಯಕ್ರಮ ನಡೆಯಲಿದೆ, ಮುಂದಿನ 2 ದಿನದಲ್ಲಿ ಕಾರ್ಯಕ್ರಮ ರೂಪುರೇಷ ರೆಡಿ ಆಗಲಿದ್ದು, ಏಪ್ರಿಲ್ 23ರೊಳಗೆ ಕಾಂಗ್ರೆಸ್ ಪಾದಯಾತ್ರೆ ಮತ್ತು ಮನೆ ಮನೆಗೆ ಕಾಂಗ್ರೆಸ್ ಕಾರ್ಯಕ್ರಮ ಮತ್ತಷ್ಟು ಚುರುಕುಗೊಳಿಸಲು ಸೂಚಿಸಲಾಗಿದೆ ಎಂದು ತಿಳಿಸಿದರು. ಒಟ್ಟಾರೆ ಬಿಜೆಪಿಯ ಬೆಂಗಳೂರು ರಕ್ಷಿಸಿ ಪಾದಯಾತ್ರೆಗೆ ಟಾಂಗ್ ನೀಡಲು ಕಾಂಗ್ರೆಸ್ ಸಜ್ಜುಗೊಳ್ಳುತ್ತಿದೆ.


ಸಂಬಂಧಿತ ಟ್ಯಾಗ್ಗಳು

G.Parameshwara KPCC ಕಾರ್ಯಕ್ರಮ ಪಾದಯಾತ್ರೆ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ