'ಸರ್ಕಾರಿ ವಸತಿ ನಿಲಯಗಳ ಸ್ಥಿತಿ ಶೋಚನೀಯ'09-03-2018

ಬೆಂಗಳೂರು: ಸರ್ಕಾರಿ ವಸತಿ ನಿಲಯಗಳ ಪರಿಸ್ಥಿತಿ ಕುರಿತು ರಾಜ್ಯ ಬಿಜೆಪಿ ಘಟಕ ಸಿದ್ದ ಪಡಿಸಿರುವ ಸಮೀಕ್ಷಾ ವರದಿಯನ್ನು ಕೇಂದ್ರ ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ.ವಿ. ಸದಾನಂದಗೌಡ ಬೆಂಗಳೂರಿನಲ್ಲಿಂದು ಬಿಡುಗಡೆ ಮಾಡಿದರು. ನಂತರ ವಿಜಯನಗರದಲ್ಲಿರುವ ವಸತಿ ನಿಲಯಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದುಳಿದ, ಪರಿಶಿಷ್ಠ ಜಾತಿ ಪಂಗಡದ ವಸತಿ ನಿಲಯಗಳಲ್ಲಿ ಪರಿಸ್ಥಿತಿ ಶೋಚನೀಯವಾಗಿದೆ. ಈ ವರ್ಗಕ್ಕೆ ಮೀಸಲಾದ ಹಣವನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ. ಶುದ್ದ ಕುಡಿಯುವ ನೀರಿನ ಸಮಸ್ಯೆಯಿದ್ದು, ಶೌಚಾಲಯಗಳು ಸುಸ್ಥಿತಿಯಲ್ಲಿ ಇಲ್ಲ ಎಂದು ಆರೋಪಿಸಿದರು.

ಕಳೆದ ನಾಲ್ಕೂವರೆ ವರ್ಷಗಳಲ್ಲಿ ಒಂದು ಸಾವಿರದ 284 ಕೋಟಿ ರೂಪಾಯಿ ಮೊತ್ತದ ಹಣವನ್ನು ಸೂಕ್ತ ಟೆಂಡರ್ ಕರೆಯದೇ ಬಿಡುಗಡೆ ಮಾಡಲಾಗಿದೆ ಎಂದು ಎಂ.ಪಿ.ನರೇಂದ್ರ ಸ್ವಾಮಿ ಅವರ ವರದಿ ನೀಡಿದ್ದು ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸಚಿವ ಸದಾನಂದಗೌಡ ಒತ್ತಾಯಿಸಿದರು.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ