ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ

A man attempted to rape a minor girl: uttara kannada

10-03-2018

ಉತ್ತರ ಕನ್ನಡ: ಶಾಲೆಯಿಂದ‌ ಮನೆಗೆ ತೆರಳುತ್ತಿದ್ದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಯತ್ನಿಸಿದ ವ್ಯಕ್ತಿಯೊರ್ವನನ್ನು ಗ್ರಾಮಸ್ಥರು ಹಿಗ್ಗಾಮುಗ್ಗ ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಜಿಲ್ಲೆಯ ಸಿದ್ದಾಪುರ ತಾಲ್ಲೂಕಿನ ದೊಡ್ಮನೆ ಗ್ರಾಮದ ಬಳಿ ಘಟನೆ ನಡೆದಿದೆ. ನಾಗೇಶ್ ರಾಮಚಂದ್ರ ನಾಯ್ಕ್(35) ಬಂಧಿತ ಆರೋಪಿ. ನಿನ್ನೆ ಸಂಜೆ ಶಾಲೆಯಿಂದ ಮನೆಗೆ ಏಕಾಂಗಿಯಾಗಿ ತೆರಳುತ್ತಿದ್ದ 13 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಆದರೆ ಈತ ಹತ್ತಿಬರುತ್ತಿದ್ದಂತೆ ಕೂಗಿಕೊಂಡು ಬಾಲಕಿ, ತಪ್ಪಿಸಿಕೊಂಡು ಬಂದು ಗ್ರಾಮಸ್ಥರಿಗೆ ವಿಷಯ ತಿಳಿಸಿದ್ದಾಳೆ. ಅದೇ ದಾರಿಯಲ್ಲಿ ಸಾಗುತ್ತಿದ್ದ ಆರೋಪಿಯನ್ನ ಅಡ್ಟಗಟ್ಟಿದ ಗ್ರಾಮಸ್ಥರು ಥಳಿಸಿ, ಪೊಲೀಸರಿಗೆ ಒಪ್ಪಿಸಿದ್ದಾರೆ. ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಸಂಬಂಧಿತ ಟ್ಯಾಗ್ಗಳು

rape armature girl ಹಿಗ್ಗಾಮುಗ್ಗ ಆರೋಪಿ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ