ಸದಾನಂದ ಗೌಡರಿಗೆ ಸಿಎಂ ತಿರುಗೇಟು

sadananda gowda v/s cm siddaramaiah

10-03-2018

ಮೈಸೂರು: ನಮ್ಮ ಸರ್ಕಾರ ಹಾಸ್ಟೆಲ್ ಗಳನ್ನು ಅಭಿವೃದ್ಧಿ ಮಾಡಿದಷ್ಟು ಹಿಂದಿನ ಯಾವ ಸರ್ಕಾರಗಳೂ ಮಾಡಿಲ್ಲ ಎಂದು, ಸರ್ಕಾರಿ ವಸತಿ ನಿಲಯಗಳ ಬಗ್ಗೆ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡರು ನೀಡಿರುವ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಟಾಂಗ್ ನೀಡಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಚುನಾವಣೆ ಹಿನ್ನೆಲೆ ಬಿಜೆಪಿಯವರು ಸುಳ್ಳು ಹೇಳಿಕೊಂಡು, ಸುಳ್ಳು ವರದಿಗಳನ್ನು ತಯಾರು ಮಾಡಿಕೊಂಡು ಓಡಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ವಸತಿ ಹಾಗೂ ವಸತಿ ರಹಿತ ವಿದ್ಯಾರ್ಥಿ ನಿಲಯಗಳನ್ನು ಹೆಚ್ವಿನ ಸಂಖ್ಯೆಯಲ್ಲಿ ಆರಂಭ ಮಾಡಿದ್ದು ನಮ್ಮ ಸರ್ಕಾರ. ಅಧಿಕಾರದಲ್ಲಿ ಇದ್ದಾಗ ಏನೂ ಮಾಡದ ಬಿಜೆಪಿಯವರು ಈಗ ಸುಳ್ಳು ಹೇಳುತ್ತಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ.

ಕಾವೇರಿ ಜಲ ವಿವಾದ ಸಂಬಂಧ ನಮ್ಮ ವಕೀಲರ ತಂಡದ ಸಲಹೆ ಪ್ರಕಾರವೇ ಮುಂದಿನ ಹೆಜ್ಜೆ ಇಡಲಾಗುವುದು. ಅಧಿಕಾರಿಗಳೊಂದಿಗೆ ಹೇಗೆ ನಡೆದುಕೊಳ್ಳಬೇಕು, ಅಧಿಕಾರಿಗಳಿಂದ ಹೇಗೆ ಕೆಲಸ ಮಾಡಿಸಬೇಕು ಎಂಬುದನ್ನು ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಅವರಿಂದ ಕಲಿಯಬೇಕಿಲ್ಲ. ಕುಮಾರ ಸ್ವಾಮಿಯವರು ರಾಜಕೀಯಕ್ಕೆ ಬರುವ ಮೊದಲೇ ನಾನು ಮಂತ್ರಿಯಾಗಿದ್ದೆ. ಚುನಾವಣೆ ಸಮೀಪಿಸುತ್ತಿರುವಾಗ ಕುಮಾರಸ್ವಾಮಿಯವರು ಏನೇನೋ ಆರೋಪ ಮಾಡುತ್ತಿದ್ದಾರೆ ಎಂದರು.

ಎಐಸಿಸಿ ಅಧ್ಯಕ್ಷರಾದ ರಾಹುಲ್ ಗಾಂಧಿಯವರು ಇದೇ ತಿಂಗಳ 24, 25ರಂದು ಮೈಸೂರು, ಮಂಡ್ಯ, ಚಾಮರಾಜನಗರ ಜಿಲ್ಲೆಗಳಲ್ಲಿ  ಪ್ರವಾಸ ಕೈಗೊಳ್ಳಲಿದ್ದಾರೆ. 25ರ ಸಂಜೆ 4ಗಂಟೆಗೆ ಮೈಸೂರಿನ ಮಹಾರಾಜ ಮೈದಾನದಲ್ಲಿ ಬೃಹತ್ ಸಮಾವೇಶವನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ ಎಂದು ತಿಳಿಸಿದರು.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ