‘ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ’10-03-2018

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದು, ಈ ಸಂದರ್ಭದಲ್ಲಿ ಬಿಜೆಪಿ ನಾಯಕರ ಹಲವು ಹೇಳಿಕೆಗಳು ಜನರ ದಿಕ್ಕು ತಪ್ಪಿಸುವ ಪ್ರಯತ್ನ ಎಂದು, ಎಐಸಿಸಿ ಪ್ರಧಾನ ಕಾರ್ಯದರ್ಶಿ ಬಿ.ಕೆ.ಹರಿಪ್ರಸಾದ್ ಕೆಪಿಸಿಸಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.

ಲೋಕಾಯುಕ್ತರ ನ್ಯಾಯಮೂರ್ತಿ ಮೇಲೆ ಹಲ್ಲೆ ಪ್ರಕರಣ ಸಂಬಂಧ ಯಡಿಯೂರಪ್ಪನವರು, ಸರ್ಕಾರ ಲೋಕಾಯುಕ್ತ ಸಂಸ್ಥೆಯನ್ನು ದುರ್ಬಲಗೊಳಿಸಿದೆ, ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಬಿಜೆಪಿಯವರು ಆರೋಪಿಸುತ್ತಿದ್ದಾರೆ. ಆದರೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ ಚೆನ್ನಾಗಿದೆ. ಬಿಜೆಪಿಯವರು ದೇಶವನ್ನು ವಿನಾಶದ ಕಡೆಗೆ ಕೊಂಡೊಯ್ಯುತ್ತಿದ್ದಾರೆ ಎಂದು ದೂರಿದರು.

ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಅವರ ಮಗನ ಆಸ್ತಿ ಒಂದೇ ವರ್ಷದಲ್ಲಿ ಊಹೆಗೂ ನಿಲುಕದಷ್ಟು ಏರಿಕೆಯಾಗಿದೆ, ಇವರೆಲ್ಲ ಭ್ರಷ್ಟಾಚಾರದ ಬಗ್ಗೆ ಮಾತಾಡ್ತಾರೆ ಎಂದು ವ್ಯಂಗ್ಯವಾಡಿದರು. ಬಿಜೆಪಿಯವರು ಮಾಡುವ ಆರೋಪಗಳಿಗೆ ಒಂದೇ ವೇದಿಕೆಯಲ್ಲಿ ಬಹಿರಂಗ ಚರ್ಚೆಗೆ ಸಿದ್ಧ ಎಂದು ಹರಿಪ್ರಸಾದ್ ಸವಾಲು ಹಾಕಿದ್ದಾರೆ.

ಪಾಕಿಸ್ತಾನದ ಉಗ್ರರು ಗುರುದಾಸ್ ಪುರಕ್ಕೆ ಬಂದು ಎಸ್.ಪಿ ಮೇಲೆ ಅಟ್ಯಾಕ್ ಮಾಡಿ ಹೋದರು. ಆದರೆ ಕೆಂದ್ರ ಬಿಜೆಪಿ, ಸರ್ಜಿಕಲ್ ಸ್ಟ್ರೈಕ್ ಎಂದು ಹೇಳಿ ತಪ್ಪಿಸಿಕೊಳ್ಳುತ್ತಿದ್ದಾರೆ. ಕೇಂದ್ರ ಬಿಜೆಪಿ  ಉತ್ತಮ ಆಡಳಿತ ನೀಡುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದರು.

ಯಾವುದೇ ಪಕ್ಷದ ನಾಯಕರು ಇನ್ನೊಬ್ಬರ ಮೇಲೆ ಆರೋಪ ಮಾಡುವಾಗ ತಮ್ಮ ಚರಿತ್ರೆ ಬಗ್ಗೆಯೂ ಅರಿವಿರಬೇಕು, ಅಶೋಕ್ ಖೇಣಿ, ಆನಂದ್ ಸಿಂಗ್ ಸೇರ್ಪಡೆ ವಿಚಾರದ ಕುರಿತು, ಖೇಣಿ, ಆನಂದ್ ಸಿಂಗ್ ಅವರಿಗೆ ಪಕ್ಷದ ನಾಯಕತ್ವ ವಹಿಸಿಲ್ಲ, ಆದರೆ ಬಿಜೆಪಿ ರಾಜ್ಯ ನಾಯಕತ್ವ ವಹಿಸಿಕೊಂಡಿರುವ ಯಡಿಯೂರಪ್ಪ ಜೈಲಿಗೆ ಹೋಗಿ ಬಂದವರು ಎಂದು ಟಾಂಗ್ ನೀಡಿದ್ದಾರೆ.


ಸಂಬಂಧಿತ ಟ್ಯಾಗ್ಗಳು

B.K.Hariprasad KPCC ಅಶೋಕ್ ಖೇಣಿ ಆನಂದ್ ಸಿಂಗ್


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ