ಯಲಬುರ್ಗಾದಲ್ಲಿ ಬಿಜೆಪಿಗೆ ಬಂಡಾಯದ ಭೀತಿ..!

dissent in yelburga bjp..?

12-03-2018

ಕೊಪ್ಪಳ: ಜಿಲ್ಲೆಯ ಯಲಬುರ್ಗಾ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಗೆ ಬಂಡಾಯದ ಭೀತಿ ಎದುರಾಗುವ ಸ್ಥಿತಿಯಲ್ಲಿದೆ. ಕ್ಷೇತ್ರದಲ್ಲಿ ಪ್ರಬಲ ಗಾಣಿಗ ಸಮುದಾಯದ ಚಂದ್ರಶೇಖರ ಬೀಳಗಿ ಅವರು ಟಿಕೆಟ್ಗಾಗಿ ಒತ್ತಾಯ ಮಾಡುತ್ತಿದ್ದು, ಹಿರಿಯ ನಾಯಕರು ಟಿಕೆಟ್ ನೀಡುವ ಭರವಸೆ ನೀಡಿದ್ದಾರೆ ಎನ್ನಲಾಗಿದೆ. ಒಂದು ವೇಳೆ ಟಿಕೆಟ್ ನೀಡದಿದ್ದರೇ ಬಂಡಾಯ ಅಭ್ಯರ್ಥಿಯಾಗಿ ನಿಲ್ಲುವ ಘೋಷಣೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಯಲಬುರ್ಗಾದಲ್ಲಿ ಗಾಣಿಗ ಸಮುದಾಯದ ಮತಗಳು ನಿರ್ಣಾಯಕವಾಗಿದ್ದು, ಬಿಜೆಪಿಗೆ ಬಂಡಾಯದ ಭೀತಿ ಶುರುವಾಗಿದೆ. ಇದು ಕ್ಷೇತ್ರದಲ್ಲಿ ಗೆಲ್ಲುವ ಭರವಸೆ ಇಟ್ಟುಕೊಂಡಿರುವ ಹಾಲಪ್ಪ ಆಚಾರ್ ಅವರಿಗೂ ಸಂಕಷ್ಟ ತಂದೊಡ್ಡಿದೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ