ಕ್ಷುಲ್ಲಕ ಕಾರಣಕ್ಕೆ ಹೆಂಡತಿ ಕೊಲೆ

Wife murder for trivial reason..!

12-03-2018 544

ದೊಡ್ಡಬಳ್ಳಾಪುರ: ಕುಡಿದ ಮತ್ತಿನಲ್ಲಿ ಗಂಡ ತನ್ನ ಹೆಂಡತಿಯನ್ನೇ ಕೊಲೆ ಮಾಡಿದ್ದಾನೆ. ಘಟನೆ ಬೆಂಗಳೂರು ಗ್ರಾಮಾಂತರ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಕ್ಷುಲ್ಲಕ ಕಾರಣಕ್ಕೆ ಗಂಡ-ಹೆಂಡತಿ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಗೌರಮ್ಮ (35) ಮೃತ ಮಹಿಳೆ. ಸಂತೋಷ್ ಕುಮಾರ್ ಹೆಂಡತಿಯನ್ನು ಕೊಂದ ಪತಿಯಾಗಿದ್ದು, ಪೊಲೀಸರು ಬಂಧಿಸಿದ್ದಾರೆ. ಸಂತೋಷ್ ದಂಪತಿಗಳು ಕೋಲಾರ ಮೂಲದವರು ಎಂದು ತಿಳಿದು ಬಂದಿದೆ. ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಸಂಬಂಧಿತ ಟ್ಯಾಗ್ಗಳು

Murder wife ದೊಡ್ಡಬೆಳವಂಗಲ ಗಂಡ-ಹೆಂಡತಿ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ