ತಹಶೀಲ್ದಾರ್ ಗೆ ಬೆದರಿಕೆ: ಆರೋಪಿ ಬಂಧನ

Tahsildar threatens: police arrested accused

12-03-2018

ಚಿತ್ರದುರ್ಗ: ಚಳ್ಳಕೆರೆ ನಗರಸಭೆ ಸದಸ್ಯ ಶಿವಮೂರ್ತಿ ಎಂಬಾತ ತಹಶೀಲ್ದಾರ್ಗೆ ಬೆದರಿಕೆ ಹಾಕಿದ್ದಾನೆ. ಕಾಂಗ್ರೆಸ್ ನಿಂದ ಗೆದ್ದು ಬಂದಿದ್ದರೂ, ಸದ್ಯ ಬಿಜೆಪಿಯಲ್ಲಿ ಗುರುತಿಸಿಕೊಂಡಿರುವ ಶಿವಮೂರ್ತಿ ತಹಶೀಲ್ದಾರ್ ಕಾಂತರಾಜ್ ಅವರಿಗೆ ಕರೆ ಮಾಡಿ ಆವಾಜ್ ಹಾಕಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ನನ್ನ ಅರೆಸ್ಟ್ ಮಾಡಿಸುವ ತಾಕತ್ ಇದೆಯಾ ನಿನಗೆ, ಕಾಂಗ್ರೆಸ್ ಶಾಸಕ ರಘುಮೂರ್ತಿ ಅಣತಿಯಂತೆ ಆಡಳಿತ ಮಾಡುತ್ತೀಯಾ, ಕಚೇರಿಗೆ ಬಂದಾಗ ಏಕವಚನದಲ್ಲಿ ಹೇಳಿ ಹೊರಕಳಿಸುತ್ತೀಯಾ ಎಂದು ಬಾಯಿಗೆ ಬಂದಂತೆ ಮಾತನಾಡಿದ್ದಾನೆ.ಈ ಆಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಕುರಿತು ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ತಹಶೀಲ್ದಾರ್ ಕಾಂತರಾಜ್  ದೂರು ನೀಡಿದ್ದು, ಪ್ರಾಣ ಬೆದರಿಕೆ, ಕೊಲೆಯತ್ನ, ಕರ್ತವ್ಯಕ್ಕೆ ಅಡ್ಡಿ ಆರೋಪದಡಿ ನಗರಸಭೆ ಸದಸ್ಯ ಶಿವಮೂರ್ತಿಯನ್ನು ಪೊಲೀಸರ ವಶಕ್ಕೆ ಪಡೆದಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Tahsildar complaint ಕಚೇರಿ ಬೆದರಿಕೆ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ