ಬೆಳಗಾವಿಯಲ್ಲಿ ದೇಶದ ಅತಿ ಎತ್ತರದ ಧ್ವಜಸ್ತಂಭ

The tallest flag of the country in belagavi

12-03-2018

ಬೆಳಗಾವಿ: ಕುಂದಾನಗರಿ ಬೆಳಗಾವಿಯಲ್ಲಿ ಭಾರತದಲ್ಲೇ ಅತಿ ಎತ್ತರದ (110 ಮೀಟರ್) ಧ್ವಜಸ್ತಂಭವನ್ನು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಮತ್ತು ಶಾಸಕ ಫಿರೋಜ್ ಸೇಠ್ ಅವರು ಲೋಕಾರ್ಪಣೆ ಮಾಡಿದರು. ಅತಿ ಎತ್ತರದಲ್ಲಿ ರಾಷ್ಟ್ರಧ್ವಜ ಹಾರಿಸಲಾಯಿತು. ಕಾರ್ಯಕ್ರಮದಲ್ಲಿ ನೂರಾರು ಮಂದಿ ನಾಗರಿಕರು, ಗಣ್ಯರು, ಅಧಿಕಾರಿಗಳು ಭಾಗಿಯಾಗಿದ್ದರು. ಈ ವೇಳೆ ರಮೇಶ ಜಾರಕಿಹೊಳಿ ಮಾತನಾಡಿ, ‘ದೇಶದ ಅತಿ ಎತ್ತರದ ಧ್ವಜಸ್ತಂಭವನ್ನು ರಾಜ್ಯ ಹಾಗೂ ದೇಶಕ್ಕೆ ಸಮರ್ಪಿಸುತ್ತಿರುವುದಕ್ಕೆ ಹೆಮ್ಮೆಯಾಗುತ್ತಿದೆ, ದೇಶ ಯಾರೋ ಒಬ್ಬರದಲ್ಲ, ಎಲ್ಲರದೂ. ಎಲ್ಲರೂ ಅಣ್ಣ ತಮ್ಮಂದಿರಂತೆ ಸೌಹಾರ್ದದಿಂದ ಇರಬೇಕು ಎಂದರು.


ಸಂಬಂಧಿತ ಟ್ಯಾಗ್ಗಳು

tri-color flag ರಾಷ್ಟ್ರಧ್ವಜ ಕುಂದಾನಗರಿ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ