ಎಸ್ಸೆಲ್ಸಿ ಪರೀಕ್ಷಾರ್ಥಿಗಳಿಗೆ ಉಚಿತ ಪ್ರಯಾಣ

free travel for sslc exam students

12-03-2018

ಬೆಂಗಳೂರು: ರಾಜ್ಯದಲ್ಲಿ ಮಾ.23ರಿಂದ ಆರಂಭವಾಗುತ್ತಿರುವ ಎಸ್‍ಎಸ್‍ಎಲ್‍ಸಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಉಚಿತ ಸಂಚಾರ ಸೇವೆ ಒದಗಿಸಲು ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆಎಸ್‍ಆರ್‍ಟಿಸಿ) ಮುಂದಾಗಿದೆ. ಮಾರ್ಚ್ 23ರಿಂದ ಏಪ್ರಿಲ್ 6ರವರೆಗೆ ಪರೀಕ್ಷೆಗೆ ಹಾಜರಾಗುವ ಎಲ್ಲಾ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳು ತಮ್ಮ ವಾಸ ಸ್ಥಳದಿಂದ ಪರೀಕ್ಷಾ ಕೇಂದ್ರದವರೆಗೆ ಮತ್ತು ವಾಸ ಸ್ಥಳಕ್ಕೆ ಹಿಂದಿರುಗುವಾಗ ಉಚಿತವಾಗಿ ಸಂಸ್ಥೆಯ ಬಸ್‍ಗಳಲ್ಲಿ ಪ್ರಯಾಣಿಸಬಹುದು.

ಉಚಿತವಾಗಿ ಸಂಚರಿಸಲು ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್‍ಗಳಲ್ಲಿ ಪ್ರಯಾಣಿಸಬಹುದು ಎಂದು ಸಂಸ್ಥೆಯ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ಅವರ ವಿದ್ಯಾ ಸಂಸ್ಥೆಯ ಹೊರತಾಗಿ ಇತರೆ ವಿದ್ಯಾ ಸಂಸ್ಥೆಗಳಲ್ಲಿ ಪರೀಕ್ಷಾ ಕೇಂದ್ರಗಳ ನಿಯೋಜನೆಯಾಗಿರುವುದರಿಂದ ಒಂದೆಡೆಯಿಂದ ಇನ್ನೊಂದೆಡೆ ಮಕ್ಕಳಿಗೆ ತೆರಳಲು ಅನುಕೂಲವಾಗಲಿ ಎನ್ನುವ ದೃಷ್ಟಿಯಿಂದ ಈ ಸೇವೆ ನೀಡುವುದಾಗಿ ಅವರು ಹೇಳಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ