ಪತಿ ಅನುಮಾನಕ್ಕೆ ಪತ್ನಿ ಬಲಿ

A married woman committed suicide: bengaluru

12-03-2018

ಬೆಂಗಳೂರು: ಪತಿ ಶೀಲ ಶಂಕಿಸಿದ ಹಿನ್ನೆಲೆಯಲ್ಲಿ ಖಾಸಗಿ ಕಂಪನಿಯ ಸಾಫ್ಟ್ ವೇರ್ ಎಂಜಿನಿಯರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಚೆನ್ನಮ್ಮನ ಕೆರೆ ಅಚ್ಚುಕಟ್ಟುವಿನ ಭುವನೇಶ್ವರಿನಗರದಲ್ಲಿ ನಡೆದಿದೆ. ಭುವನೇಶ್ವರಿನಗರದ ತುಳಸಿ ಆತ್ಮಹತ್ಯೆ ಮಾಡಿಕೊಂಡವರು, ಪ್ರತಿಷ್ಠಿತ ಕಂಪನಿಯಲ್ಲಿ ಸಾಫ್ಟ್ ವೇರ್ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ ತುಳಸಿ ಪತಿ ವಿಜಯ ಕಿರಣ್ ತನ್ನ ಮೇಲೆ ಯಾವಾಗಲೂ ಅನುಮಾನ ಪಡುತ್ತಿದ್ದು, ಬೇರೊಬ್ಬರ ಜೊತೆ ಅಕ್ರಮ ಸಂಬಂಧ ಹೊಂದಿದ್ದೀಯಾ ಎಂದು ಶೀಲ ಶಂಕಿಸಿ ಜಗಳ ಮಾಡುತ್ತಿದ್ದ.

ಈ ವಿಚಾರಕ್ಕೆ ಸಂಬಂಧಿಸಿದಂತೆ ವಿಜಯ್ ಹಾಗೂ ತುಳಸಿ ನಡುವೆ ಆಗಾಗ ಜಗಳ ನಡೆಯುತ್ತಿತ್ತು. ನಿನ್ನೆ ರಾತ್ರಿಯೂ ಈ ವಿಚಾರಕ್ಕೆ ಸಂಬಂಧಿಸಿದಂತೆ ಜಗಳ ನಡೆದಿದೆ. ಇದರಿಂದ ಮನನೊಂದು ತುಳಸಿ ನೇಣು ಬಿಗಿದುಕೊಂಡಿದ್ದಾರೆ. ನೇಣಿನ ಕುಣಿಕೆಯಿಂದ ತುಳಸಿಯನ್ನು ಇಳಿಸಿ ಖಾಸಗಿ ಯೋಗಾನಂದ ಆಸ್ಪತ್ರೆಗೆ ಕರೆದೊಯ್ದಿದ್ದನು. ಪರೀಕ್ಷೆ ನಡೆಸಿದ ವೈದ್ಯರು ತುಳಸಿ ಸಾವನ್ನಪ್ಪಿದ್ದಾರೆ ಎಂದು ಹೇಳಿದ್ದಾರೆ. ನಂತರ ವಿಜಯ್ ಮತ್ತೆ ಶವವನ್ನ ತಂದು ಮನೆಯ ಸೋಫಾ ಮೇಲೆ ಹಾಕಿ ಕುಳಿತ್ತಿದ್ದ. ಇದಾದ ಬಳಿಕ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಚೆನ್ನಮ್ಮನ ಕೆರೆ ಅಚ್ಚುಕಟ್ಟು ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 


ಸಂಬಂಧಿತ ಟ್ಯಾಗ್ಗಳು

suicide suspect ಸಾಫ್ಟ್ ವೇರ್ ಎಂಜಿನಿಯರ್


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ