ಮುಂಡರಗಿಯಲ್ಲಿ ಅಕ್ರಮ ಮರಳು ದಂಧೆ

illegal sand mafia in mundaragi: gadag

12-03-2018

ಗದಗ: ಜಿಲ್ಲೆಯ ಮುಂಡರಗಿ ತಾಲ್ಲೂಕಿನ ‌ಹೆಸರೂರ ಗ್ರಾಮದ ಬಳಿಯ ತುಂಗಭದ್ರಾ ನದಿಯಲ್ಲಿ ಕಾನೂನು ಮೀರಿ ‌ನದಿಯಲ್ಲಿ ರಸ್ತೆ ನಿರ್ಮಿಸಿ ಮರಳು ದಂಧೆ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ಆನಂದಗೌಡ ದೊಡ್ಡಮನಿ ಎಂಬುವರು ಗಣಿ ಮತ್ತು ಭೂವಿಜ್ಞಾನ ಇಲಾಖೆಯಿಂದ ‌ಮರಳು ಸಾಗಾಣೆಗೆ ಟೆಂಡರ್ ಪಡೆದಿದ್ದು, ಕಾನೂನು ಉಲ್ಲಂಘಿಸಿ ಅಕ್ರಮ ಮರಳು ದಂಧೆ ನಡೆಸುತ್ತಿದ್ದಾರೆ. ಅಕ್ರಮದ ವಿಚಾರ ಅಧಿಕಾರಿಗಳಿಗೆ ಗೊತ್ತಿದ್ದರೂ ಕ್ರಮ ಕೈಗೊಳ್ಳಲು ಹಿಂದೇಟು ಹಾಕುತ್ತಿದ್ದಾರೆ. ತಮ್ಮ ಪ್ರಭಾವ ಬಳಸಿ ನದಿ ಹಾಳು ಮಾಡಿ ಮರಳು ಲೂಟಿ ಮಾಡುತ್ತಿದ್ದರೂ, ಜಿಲ್ಲಾಡಳಿತ ‌ಮೌನದ ಬಗ್ಗೆ ಸಾರ್ವಜನಿಕರ ‌ಆಕ್ರೋಶ ವ್ಯಕ್ತಪಡಿಸಿದ್ದಾರೆ. ಟೆಂಡರ್ರದ್ದು ಪಡಿಸಿ ಆನಂದಗೌಡ ವಿರುದ್ಧ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

tungabhadra sand mafia ಜಿಲ್ಲಾಡಳಿತ ಟೆಂಡರ್


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ