ನಗರದಲ್ಲಿ ಮತ್ತೊಂದು ಬೆಂಕಿ ಅವಘಡ

fire at LIC building in bengaluru

13-03-2018

ಬೆಂಗಳೂರು: ನಗರದಲ್ಲಿ ಬೆಳ್ಳಂಬೆಳಿಗ್ಗೆ ಬೆಂಕಿ ಅವಘಡ ಸಂಭವಿಸಿದೆ. ಎಂಜಿ ರಸ್ತೆಯ ಕುಂಬ್ಳೆ ಸರ್ಕಲ್ ಬಳಿಯ ಎಲ್ಐಸಿ ಕಚೇರಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಬೆಳಿಗ್ಗೆ ಸುಮಾರು 6.30ರಲ್ಲಿ ಅವಘಡ ಸಂಭವಿಸಿದ್ದು, ಎರಡು ಅಗ್ನಿಶಾಮಕ ವಾಹನಗಳಲ್ಲಿ ದಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಬೆಂಕಿ ಅವಘಡದಿಂದ ಕಚೇರಿಯಲ್ಲಿನ ಹಲವು  ಕಡತಗಳು, ಪೀಠೋಪಕರಣಗಳು ಬೆಂಕಿಗಾಹುತಿಯಾಗಿವೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ