'ಪ್ರಾಮಾಣಿಕ ಅಧಿಕಾರಿಗಳಿಗೆ ನ್ಯಾಯ ದೊರಕಿಸಬೇಕು'13-03-2018 162

ಶಿವಮೊಗ್ಗ: ಮುಖ್ಯಮಂತ್ರಿ ಸಿದ್ದರಾಮ್ಯ ಸರ್ವಾಧಿಕಾರಿ ಧೋರಣೆ ತಾಳಿದ್ದಾರೆ‌ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಸಿಎಂ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದ ಐಪಿಎಸ್ ಅಧಿಕಾರಿಗಳ ಸಂಘದ ಅಧ್ಯಕ್ಷರೂ ಆಗಿರುವ ಎಡಿಜಿಪಿ ಆರ್.ಪಿ.ಶರ್ಮಾಗೆ ನೋಟಿಸ್ ನೀಡಿರುವುದರ ಕುರಿತು ಮಾತನಾಡಿದ ಅವರು, ಪತ್ರ ಬರೆದ ಐಪಿಎಸ್ ಅಧಿಕಾರಿ ಶರ್ಮಾಗೆ ನೋಟಿಸ್ ನೀಡಿರುವುದು ನಾಚಿಗೆ ಗೇಡು. ತಮಗೆ ಆಗಿರುವ ನೋವನ್ನು ಮುಖ್ಯಕಾರ್ಯದರ್ಶಿಗೆ ತಿಳಿಸಿದ್ದಾರೆ, ಅವರೇನು ಪತ್ರಿಕಾಗೋಷ್ಠಿ ಮಾಡಿಲ್ಲ. ರಾಜ್ಯದಲ್ಲಿ ಪ್ರಾಮಾಣಿಕ ಅಧಿಕಾರಿಗಳಿಗೆ ನ್ಯಾಯ ದೊರಕಿಸಬೇಕು ಎಂದ ಅವರು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹಾಳಾಗಿದೆ ಎಂದು ದೂರಿದ್ದಾರೆ.


ಸಂಬಂಧಿತ ಟ್ಯಾಗ್ಗಳು

K.S.Eshwarappa chief secretary ಐಪಿಎಸ್ ಪ್ರಾಮಾಣಿಕ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ