ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದಲ್ಲಿ ಶಂಕಿತ ಉಗ್ರರಿಂದ ಕಾರ್ ಹೈಜಾಕ್

Kannada News

10-05-2017

ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದಲ್ಲಿ ಶಂಕಿತ ಉಗ್ರರು ಕಾರೊಂದನ್ನು ಹೈಜಾಕ್ ಮಾಡಿದ್ದು, ಈ ಹಿನ್ನಲೆಯಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ. ಪುಲ್ವಾಮ ಜಿಲ್ಲೆಯ ಸಂಬೂರ ಎಂಬ ಪ್ರದೇಶದಲ್ಲಿ ವ್ಯಕ್ತಿಯೊಬ್ಬರು ತಮ್ಮ ಕಾರನ್ನು ನಿಲ್ಲಿಸಿದ್ದರು. ಈ ವೇಳೆ ಸ್ಥಳಕ್ಕೆ ಬಂದಿರುವ ಶಸ್ತ್ರಾಸ್ತ್ರಧಾರಿಗಳ ಗುಂಪು ವ್ಯಕ್ತಿಯನ್ನು ಬೆದರಿಸಿ ಕಾರನ್ನು ಕಿತ್ತುಕೊಂಡು ಹೋಗಿದ್ದಾರೆ. ವ್ಯಕ್ತಿ ನೀಡಿದ ಮಾಹಿತಿ ಹಿನ್ನಲೆಯಲ್ಲಿ ಜಮ್ಮು ಮತ್ತು ಕಾಶ್ಮೀರದಾದ್ಯಂತ ಹೈ ಅಲರ್ಟ್ ಘೋಷಿಸಲಾಗಿದೆ. ಶಂಕಿತ ಉಗ್ರರು ಕಾರನ್ನು ಹೈಜಾಕ್ ಮಾಡಿರಬಹುದು ಎಂದು ಶಂಕಿಸಲಾಗಿದೆ. ಈಗಾಗಲೇ ಎಲ್ಲಾ ಪೊಲೀಸ್ ಠಾಣೆಗಳು, ನಿಯಂತ್ರಣ ಕೊಠಡಿ ಮತ್ತು ಭದ್ರತಾ ಸಂಸ್ಥೆಗಳಿಗೆ ಮಾಹಿತಿ ನೀಡಲಾಗಿದೆ. ರಾಷ್ಟ್ರೀಯ ಹೆದ್ದಾರಿಗಳಲ್ಲಿ ಭದ್ರತೆಯನ್ನು ನಿಯೋಜಿಸಲಾಗಿದೆ. ಕಳ್ಳತನ ಮಾಡಿರುವ ಕಾರನ್ನು ಉಗ್ರರು ತಮ್ಮ ಚಟುವಟಿಕೆಗಳಿಗೆ ಬಳಸಿಕೊಳ್ಳುವ ಸಾಧ್ಯತೆಗಳಿದ್ದು, ಅನುಮಾನ ಬಂದ ವಾಹನಗಳನ್ನು ಪರಿಶೀಲನೆ ನಡೆಸಲಾಗುತ್ತಿದೆ. 

Links :ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ