ಆಸ್ಪತ್ರೆಯಿಂದ ನ್ಯಾ.ವಿಶ್ವನಾಥ್ ಶೆಟ್ಟಿ ಡಿಸ್ಚಾರ್ಜ್

Lokayukta Justice Vishwanath Shetty Discharged from Mallya Hospital

14-03-2018

ಬೆಂಗಳೂರು: ತಮ್ಮ ಮೇಲೆ ನಡೆದ ದಾಳಿಯ ಬಗ್ಗೆ ಮಾತನಾಡಲು ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ ಶೆಟ್ಟಿ ಅವರು ನಿರಾಕರಿಸಿದ್ದಾರೆ. ಚಾಕು ಇರಿತಕ್ಕೆ ಒಳಗಾಗಿ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ ಶೆಟ್ಟಿ ಅವರು ಮಲ್ಯ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಗೆ ತೆರಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದರು.

ಆಸ್ಪತ್ರೆಯಿಂದ ಮನೆಗೆ ಹೋಗಲು ಹೊರಬರುತ್ತಿದ್ದಂತೆಯೇ ಆಸ್ಪತ್ರೆ ಸಿಬ್ಬಂದಿ ಹಾಗೂ ವೈದ್ಯರಿಗೆ ಧನ್ಯವಾದಗಳನ್ನು ಹೇಳಿದರು. ಮಲ್ಯ ಆಸ್ಪತ್ರೆಯಲ್ಲಿ ವೈದ್ಯರು ಉತ್ತಮ ಚಿಕಿತ್ಸೆ ನೀಡಿದ್ದಾರೆ. ಜತೆಗೆ ರಾಜ್ಯದ ಜನತೆಗೆ ಅಬಾರಿಯಾಗಿದ್ದೇನೆ. ಘಟನೆ ಕುರಿತು ಮಾತನಾಡುವುದಕ್ಕೆ ಸೂಕ್ತ ಸಮಯ ಅಲ್ಲ ಎಂದು ವಿಶ್ವನಾಥ ಶೆಟ್ಟಿ ಅವರು ತಿಳಿಸಿದರು.

ಗಾಯಗೊಂಡು ಶಸ್ತ್ರಚಿಕಿತ್ಸೆಗೆ ಒಳಗಾಗಿ ಕಳೆದೊಂದು ವಾರದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿಶ್ವನಾಥ್‍ಶೆಟ್ಟಿ ಅವರು ಸಂಪೂರ್ಣ ಗುಣಮಖರಾಗಿ ಮನೆಗೆ ತೆರಳಿದ್ದು, ಇನ್ನೂ ಅವರಿಗೆ ಒಂದು ತಿಂಗಳ ಕಾಲ ಚಿಕಿತ್ಸೆಯ ಅಗತ್ಯವಿದೆ. ಮಾ. 7ರಂದು ಲೋಕಾಯುಕ್ತ ಕಚೇರಿಗೆ ದೂರು ನೀಡಲೆಂದು ಬಂದ ತೇಜ್ ರಾಜ್ ಶರ್ಮಾ ಎಂಬಾತ ಚಾಕುವಿನಿಂದ ಇರಿದು ಹಲ್ಲೆ ಮಾಡಿದ್ದ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ