ಕರಾವಳಿ ಮತ್ತು ಮಲೆನಾಡಲ್ಲಿ ರಾಹುಲ್ ಯಾತ್ರೆ

Rahul gandhi rallies in karavali region of karnataka

15-03-2018

ಬೆಂಗಳೂರು: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರ 3ನೇ ಸುತ್ತಿನ ರಾಜ್ಯ ಪ್ರವಾಸಕ್ಕೆ ದಿನಾಂಕ ನಿದಿಯಾಗಿದೆ. ಇದೇ ತಿಂಗಳ 20 ಮತ್ತು 21ರಂದು ಮಂಗಳೂರು, ಉಡುಪಿ ಮತ್ತು ಹಾಸನ ಜಿಲ್ಲೆಗಳಲ್ಲಿ ಪ್ರವಾಸ ಮಾಡಲಿದ್ದಾರೆ. ಈಗಾಗಲೇ ಮೂರೂ ಜಿಲ್ಲೆಯ ಕಾಂಗ್ರೆಸ್ ಜಿಲ್ಲಾಧ್ಯಕ್ಷರು, ಶಾಸಕರು, ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಿಗೆ ಯಾತ್ರೆಯ ಸಂಪೂರ್ಣ ಜವಾಬ್ದಾರಿ ವಹಿಸಲಾಗಿದೆ, ಯಾತ್ರೆ ಸಂದರ್ಭದಲ್ಲಿ ಅಹಿತಕರ ಘಟನೆ ನಡೆಯದಂತೆ ಮತ್ತು ಕಾರ್ಯಕರ್ತರನ್ನು ಜಮಾಯಿಸುವ ಜವಾಬ್ದಾರಿಯನ್ನು ಆಯಾ ಜಿಲ್ಲಾ ನಾಯಕರಿಗೆ ಒಪ್ಪಿಸಲಾಗಿದೆ ಎಂದು ತಿಳಿದು ಬಂದಿದೆ. 3ನೇ ಯಾತ್ರೆ ಕರಾವಳಿ ಮತ್ತು ಮಲೆನಾಡಿನ ಭಾಗದಲ್ಲಿ ಸಾಗುತ್ತಿದ್ದು, ಹೆಚ್ಚು ಹೆಚ್ಚು ಕಾರ್ಯಕರ್ತರನ್ನು ಸೇರಿಸುವ ಜವಾಬ್ದಾರಿಯನ್ನೂ ನೀಡಲಾಗಿದೆ. ರಾಹುಲ್ ಯಾತ್ರೆಯಲ್ಲಿ ಯಾವ ಕಾಂಗ್ರೆಸ್ ನಾಯಕರು ಗೈರಾಗುವಂತಿಲ್ಲ ಎಂದು ಮುಖಂಡರು ಎಚ್ಚರಿಕೆ ನೀಡಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Rahul Gandhi congress rally ಕರಾವಳಿ ಪದಾಧಿಕಾರಿ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ