ರಾಜ್ಯ ಬಿಜೆಪಿ ನಾಯಕರಲ್ಲಿ ಆತಂಕ..!

State BJP leaders worry about up by election results..!

15-03-2018

ಬೆಂಗಳೂರು: ಉತ್ತರ ಪ್ರದೇಶದ ಗೋರಖಪುರ ಮತ್ತು ಫೂಲ್‌ಪುರ ಲೋಕಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಸೋಲುಂಡಿದೆ. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ತವರು ಕ್ಷೇತ್ರ ಗೋರಖಪುರ ಮತ್ತು ಉಪ ಮುಖ್ಯಮಂತ್ರಿ ಕೇಶವ್‌ ಪ್ರಸಾದ್‌ ಮೌರ್ಯ ಅವರು ಪ್ರತಿನಿಧಿಸುತ್ತಿದ್ದ ಲೋಕಸಭಾ ಕ್ಷೇತ್ರಗಳಲ್ಲಿಯೇ ಬಿಜೆಪಿ ಮುಖಭಂಗ ಅನುಭವಿಸಿರುವುದು ರಾಜ್ಯ ಬಿಜೆಪಿ ನಾಯಕರನ್ನು ಆತಂಕಕ್ಕೆ ದೂಡಿದೆ. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆ ಪ್ರಚಾರಕ್ಕೆಂದು ಆಗಮಿಸಿ ರಾಜ್ಯ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದರು. ಇದೀಗ ಉಪಚುವಾವಣೆ ಫಲಿತಾಂಶದಿಂದ ಆದಿತ್ಯನಾಥ್ ಅವರನ್ನು ಕರೆಯಬೇಕೇ..? ಬೇಡವೇ? ಎಂಬ ಗೊಂದಲದಲ್ಲಿದ್ದಾರೆ ರಾಜ್ಯ ಬಿಜೆಪಿ ನಾಯಕರು. ಸದ್ಯಕ್ಕೆ ಯೋಗಿ ಆದಿತ್ಯನಾಥ್ ರ‍್ಯಾಲಿಗಳು ಬೇಡ ಎನ್ನುತ್ತಿರುವುದಾಗಿಯೂ, ಅಮಿತ್ ಷಾ ಸೂಚನೆ ಕೊಟ್ಟರೆ ಮಾತ್ರ ಯೋಗಿಯನ್ನು ಕರೆಸಲು ತೀರ್ಮಾನಿಸಿದೆ ಎನ್ನಲಾಗಿದೆ. ಈ ಹಿಂದೆ ರಾಜ್ಯದಲ್ಲಿ ನಡೆದ ಬಿಜೆಪಿಯ ಮೂರು ರ‍್ಯಾಲಿಗಳಲ್ಲಿ ಯೋಗಿ ಆದಿತ್ಯನಾಥ್ ಅಬ್ಬರಿಸಿದ್ದರು.


ಸಂಬಂಧಿತ ಟ್ಯಾಗ್ಗಳು

Yogi Adityanath uttar pradesh ಅಮಿತ್ ಷಾ ಆತಂಕ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ